ಇಂದು ನಡೆಯೋ ವುಮೆನ್ಸ್ ಪ್ರೀಮಿಯರ್ ಲೀಗ್‌ನ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಜೈಂಟ್ಸ್ ತಂಡಗಳ ಮಧ್ಯೆ ಕಾದಾಟ ನಡೆಯಲಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್ಸಿಬಿ ಇತ್ತೀಚೆಗಷ್ಟೇ ಮೊದಲ ಗೆಲುವು ಸಾಧಿಸುವ ಮೂಲಕ ಭರವಸೆ ಮೂಡಿಸಿತ್ತು. ಈಗ ಮತ್ತದೆ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿ ಆರ್ಸಿಬಿ ಇದೆ. ಹೇಗಾದ್ರೂ ಮಾಡಿ ಇಂದು ಗೆದ್ದು ಪ್ಲೇ ಆಫ್ ಕನಸು ಜೀವಂತವಾಗಿ ಇರಿಸಿಕೊಳ್ಳಲು ಮುಂದಾಗಿದೆ.
ಕಳೆದ ಪಂದ್ಯ ಆರ್ಸಿಬಿ ಗುಜರಾತ್ ಜೈಂಟ್ಸ್ಗೆ ಅದ್ಭುತ ಪೈಪೋಟಿ ನೀಡಿತ್ತು. ಗುಜರಾತ್ ನೀಡಿದ್ದ 201 ರನ್ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ಆರ್ಸಿಬಿ 190 ರನ್ ಗಳಿಸಿ ಹೋರಾಟ ಅಂತ್ಯಗೊಳಿಸಿತ್ತು. ಬಳಿಕ ಕೇವಲ 11 ರನ್ನಿಂದ ಸೋಲಬೇಕಾಯ್ತು.
ಸದ್ಯ ಆರ್ಸಿಬಿ ಆಡಿದ 6 ಪಂದ್ಯಗಳಲ್ಲಿ ಕೇವಲ 5 ಸೋತಿದೆ, 1 ಪಂದ್ಯ ಮಾತ್ರ ಗೆದ್ದು ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿ ಇದೆ. ಗುಜರಾತ್ ತಂಡ ಆಡಿದ 6 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳ ಮೂಲಕ 4ನೇ ಸ್ಥಾನದಲ್ಲಿದೆ. ಇಂದು ಗೆದ್ದರೆ ಆರ್ಸಿಬಿ ನಾಲ್ಕನೇ ಸ್ಥಾನಕ್ಕೇರುವ ಸಾಧ್ಯತೆ ಇದೆ.
ಆರ್ಸಿಬಿ ತಂಡ ಹೀಗಿದೆ..!
ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ರೇಣುಕಾ ಠಾಕೂರ್/ ಪ್ರೀತಿ ಬೋಸ್.
ವಿಶೇಷ ಸೂಚನೆ: ಕ್ರಿಕೆಟ್‌ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post