ಇಂದು ಬ್ರಾಬೌರ್ನ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 7ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ಗಳಿಂದ ಗೆದ್ದು ಬೀಗಿದೆ.
ಟಾಸ್ ಗೆದ್ದು ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿತ್ತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ನಿಗದಿತ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 188 ರನ್ ಗಳಿಸಿದ್ರು.
ಗುಜರಾತ್ ನೀಡಿದ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ್ದ ಆರ್ಸಿಬಿ 15.3 ಓವರ್ನಲ್ಲೇ 2 ವಿಕೆಟ್ ಕಳೆದುಕೊಂಡು 189 ರನ್ ಬಾರಿಸೋ ಮೂಲಕ ಗೆದ್ದು ಬೀಗಿದೆ. ಆರ್ಸಿಬಿ ಪರ ಕ್ಯಾಪ್ಟನ್ ಸ್ಮೃತಿ ಮಂದಾನ 1 ಸಿಕ್ಸರ್, 5 ಫೋರ್ ಸಮೇತ 31 ರನ್ ಚಚ್ಚಿದ್ರು.
ಇನ್ನು, ಗುಜರಾತ್ ಜೈಂಟ್ಸ್ ಬೌಲರ್ಸ್ ಬೆಂಡೆತ್ತಿದ ಸೋಫಿ ಡಿವೈನ್ ಕೇವಲ 36 ಬಾಲ್ನಲ್ಲಿ ಬರೋಬ್ಬರಿ 8 ಸಿಕ್ಸರ್, 9 ಫೋರ್ ಸಮೇತ 99 ರನ್ ಚಚ್ಚಿದ ಕೇವಲ 1 ರನ್ನಿಂದ ಶತಕ ವಂಚಿತರಾದ್ರು. ಎಲ್ಸಿ ಪೆರ್ರೀ 19, ಹಿದರ್ ನೈಟ್ 22 ರನ್ ಸಿಡಿಸಿ ತಂಡವನ್ನು ಗೆಲ್ಲಿಸಿದ್ರು.
ವಿಶೇಷ ಸೂಚನೆ: ಕ್ರಿಕೆಟ್‌ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post