ಬೆಂಗಳೂರು: ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಅನುಮಾನ ಎನ್ನಲಾಗುತ್ತಿದೆ. ಈ ಸುದ್ದಿ ಸಂಚಲನ ಸೃಷ್ಟಿಸುತ್ತಿದ್ದಂತೆ ಕೋಲಾರ ಬಿಜೆಪಿ ಟಿಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಸವಾಲು ಹಾಕಿದ್ದಾರೆ.
ನ್ಯೂಸ್ ಫಸ್ಟ್ ಜೊತೆ ಮಾತನಾಡಿದ ವರ್ತೂರು ಪ್ರಕಾಶ್, ನಾನು ಒಂದೂವರೆ ತಿಂಗಳ ಹಿಂದೆಯೇ ಹೇಳಿದ್ದೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುವುದಿಲ್ಲ ಎಂದು. ಈಗ ಅದು ನಿಜವಾಯಿತಲ್ಲ ಎಂದರು. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಿದ್ರೆ ಗೆಲ್ಲುವುದು ಕಷ್ಟ ಎಂದು ಈಗ ಅವರದ್ದೇ ಪಕ್ಷದ ನಾಯಕರು ಹೇಳಿದ್ದಾರೆ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಎಲ್ಲರೂ ಈ ಮಾತನ್ನೇ ಹೇಳಿದ್ದಾರೆ.
ಇದನ್ನೂ ಓದಿ: ‘ನನ್ನ ತಂದೆ ಎಲ್ಲಿ ನಿಂತರೂ ಗೆದ್ದೇ ಗೆಲ್ಲುತ್ತಾರೆ’- ಯತೀಂದ್ರ ಸಿದ್ದರಾಮಯ್ಯ ಆತ್ಮವಿಶ್ವಾಸ
ಈಗಲೂ ನಾನು ಸಿದ್ದರಾಮಯ್ಯ ಅವರಿಗೆ ಆಗ್ರಹಿಸುತ್ತೇನೆ. ಅವರು ಆಡಿದ ಮಾತು ಉಳಿಸಿಕೊಳ್ಳಬೇಕು. ಅವರು ಕೋಲಾರದಿಂದಲೇ ಕಣಕ್ಕೆ ಇಳಿಯುತ್ತೇನೆ ಎಂದಿದ್ದರು. ಕೋಲಾರದಿಂದಲೇ ಅವರು ಸ್ಪರ್ಧೆ ಮಾಡಬೇಕು. ಈಗ ಅವರೇನಾದ್ರೂ ಕ್ಷೇತ್ರ ಬಿಟ್ಟು ಹೋದರೆ ನನ್ನನ್ನು ನೋಡಿ ಹೆದರಿಕೊಂಡು ಹೋಗಿದ್ದಾರೆ ಅಂತಾರೆ ಎಂದು ವರ್ತೂರು ಪ್ರಕಾಶ್ ಹೇಳಿದ್ದಾರೆ.
ಬಳ್ಳಾರಿವರೆಗೂ ಪಾದಯಾತ್ರೆ ಹೋಗಿದ್ದ ಸಿದ್ದರಾಮಯ್ಯ ಅವರನ್ನ ಮೈಸೂರು ಹುಲಿ ಅಂತಾರೆ. ಈಗ ಆಡಿದ ಮಾತು ಉಳಿಸಿಕೊಳ್ಳಲಿಲ್ಲ ಅಂದ್ರೆ ಏನಾಗುತ್ತೆ? ಅವರು ಕೋಲಾರಕ್ಕೆ ಬರಬೇಕು. ಕೋಲಾರದಿಂದಲೇ ಚುನಾವಣೆಗೆ ನಿಲ್ಲಬೇಕು ಎಂದು ವರ್ತೂರು ಪ್ರಕಾಶ್ ಒತ್ತಾಯಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post