ವಿಶಾಖಪಟ್ಟಣಂ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. 118 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ರೋಹಿತ್ ಪಡೆಯನ್ನೇ ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಮೊದಲು ಬ್ಯಾಟ್ ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತು. ಓಪನರ್ ಆಗಿ ಬಂದ ರೋಹಿತ್ ಶರ್ಮಾ ಕೇವಲ 13 ರನ್ಗೆ ವಿಕೆಟ್ ಒಪ್ಪಿಸಿದರು. ಬಳಿಕ ಕ್ರೀಸ್ನಲ್ಲಿ ಕೆಲ ಹೊತ್ತು ನಿಂತು ಆಡಿದ ಕೊಹ್ಲಿ 35 ಬಾಲ್ನಲ್ಲಿ 4 ಫೋರ್ ಸಮೇತ 31 ರನ್ ಸಿಡಿಸಿ ವಿವಾದಾತ್ಮಕ ತೀರ್ಪಿಗೆ ಬಲಿಯಾದ್ರು. ಕೊನೆಗೆ ಟೀಂ ಇಂಡಿಯಾ 26 ಓವರ್ನಲ್ಲಿ 117 ರನ್ಗೆ ಆಲೌಟ್ ಆಯಿತು.
ಇದನ್ನೂ ಓದಿ: ಮತ್ತೆ ವಿವಾದಾತ್ಮಕ ತೀರ್ಪಿಗೆ ಕೊಹ್ಲಿ ಬಲಿ..? ಈ ಅಂಪೈರ್ ವಿರಾಟ್ಗೆ ಪದೇ ಪದೇ ಹೀಗೆ ಮಾಡ್ತಿರೋದ್ಯಾಕೆ?
2ನೇ ಏಕದಿನ ಪಂದ್ಯವನ್ನ ಸುಲಭವಾಗಿ ಗೆದ್ದಿರುವ ಆಸ್ಟ್ರೇಲಿಯಾ ಮೂರು ಏಕದಿನ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಮೊದಲ ಏಕದಿನ ಪಂದ್ಯ ಮುಂಬೈನ ವಾಖೆಂಡೆ ಮೈದಾನದಲ್ಲಿ ನಡೆದಿತ್ತು. ಕ್ಯಾಪ್ಟನ್ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ 5 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು. 2ನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾವನ್ನ ಮುನ್ನೆಡೆಸಿದರೂ ಹೀನಾಯ ಸೋಲು ಅನುಭವಿಸಿದೆ.
2ನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ಸೋಲು ಹಾಗೂ ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಂಡಿದೆ. ಮಾರ್ಚ್ 22ರಂದು ಭಾರತ, ಆಸ್ಟ್ರೇಲಿಯಾ ನಡುವೆ 3ನೇ ಏಕದಿನ ಪಂದ್ಯ ಚೆನ್ನೈನ MA ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post