ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಆಟೋ ಚಾಲಕರು ನಾಳೆ ಒಂದು ದಿನ ಸಂಪೂರ್ಣ ಆಟೋ ಸಂಚಾರ ಬಂದ್ ಮಾಡಲು ನಿರ್ಧಾರ ಮಾಡಿದ್ದಾರೆ. ಇಂದು ಮಧ್ಯರಾತ್ರಿ 12 ರಿಂದ ನಾಳೆ ರಾತ್ರಿ ಹನ್ನೆರಡು ಗಂಟೆಯವರೆಗೆ ಸಂಚಾರ ಸ್ಥಗಿತಗೊಳಿಸಲಿದ್ದಾರೆ.
ಆಟೋ ಚಾಲಕರು ನಾಳೆ ಬೆಳಿಗ್ಗೆ 11 ಗಂಟೆಗೆ ಸಿಎಂ ರೇಸ್ ಕೋರ್ಸ್ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲಾನ್ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಡೆಡ್ಲೈನ್ ನೀಡಿದ್ದರು. ಆದರೆ ಇಂದಿಗೆ ಸಾರಥಿಗಳು ನೀಡಿದ್ದ ಗಡುವ ಕ್ಲೋಸ್ ಹಿನ್ನೆಲೆಯಲ್ಲಿ ನಾಳೆ ಮುಷ್ಕರ ನಡೆಸಲಿದ್ದಾರೆ.
ಆಟೋ ಚಾಲಕರು ಮೂರು ದಿನ ಗಡುವು ನೀಡಿದ್ರು ಸರ್ಕಾರ ಕ್ಯಾರೆ ಎನ್ನಲಿಲ್ಲ. ಮೂರು ದಿನಗಳ ಕಾಲ ಆಟೋ ಚಾಲಕರು ಕಪ್ಪು ಪಟ್ಟಿ ಕಟ್ಟಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಮುಷ್ಕರ
ಬೆಂಗಳೂರಿನ 21 ಆಟೋ ಚಾಲಕರ ಸಂಘಟನೆಗಳಿಂದ ಮುಷ್ಕರಕ್ಕೆ ನಿರ್ಧಾರ ಮಾಡಿದ್ದಾರೆ. ನಾಳೆ 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ಬಂದ್ ಆಗಲಿದೆ ಎಂದಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ರಾಜ್ಯದಲ್ಲಿ ಬ್ಯಾನ್ ಮಾಡುವಂತೆ ಒತ್ತಾಯಿಸಿ ಮಾಡುತ್ತಿರುವ ಮುಷ್ಕರ ಮಾಡಲಿದ್ದಾರೆ.
ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಎಲೆಕ್ಷನ್ ಒಳಗೆ ಚಾಲಕರಿಗೆ ಸಿಹಿ ಸುದ್ದಿ ಕೊಡ್ತಿನಿ ಎಂದು ಭರವಸೆ ನೀಡಿದ್ದರು. ಇದರಿಂದ ಆಟೋ ಚಾಲಕರು ತುಂಬಾ ಸಂತೋಷದಲ್ಲಿದ್ದಾರೆ. ಆರ್ಟಿಒದಿಂದ ರ್ಯಾಪಿಡೋ ಬ್ಯಾನ್ ಮಾಡಲು ವರದಿ ಕೇಳಿದ್ದೀನಿ. ವರದಿ ನನ್ನ ಕೈ ಸೇರಿದಂತೆ ಚಾಲಕರಿಗೆ ಸಿಹಿ ಸುದ್ದಿ ಕೊಡ್ತಿನಿ ಎಂದಿರೋ ಸಚಿವರು ಹೇಳಿದ್ದರು. ಹಾಗಾಗಿ ಇದೇ ಸಂತಸದಲ್ಲಿ ಆಟೋ ಚಾಲಕರಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post