ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ರಹಸ್ಯ ಭೇಟಿ, ಚರ್ಚೆಗಳು ಜೋರಾಗಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ ಎನ್ನಲಾಗಿದೆ.
ಎಲೆಕ್ಷನ್ ಮನೆ ಬಾಗಿಲಿಗೆ ಬಂದು ನಿಂತಿರುವಾಗ ಅರವಿಂದ ಬೆಲ್ಲದ್, ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾದರೂ ಯಾಕೆ? ಕಾಂಗ್ರೆಸ್, ಬಿಜೆಪಿ ಪಕ್ಷದ ಈ ಇಬ್ಬರೂ ನಾಯಕರ ರಹಸ್ಯ ಮಾತುಕತೆ ಕುತೂಹಲದ ಕೇಂದ್ರ ಬಿಂದುವಾಗಿದೆ.
ಇದನ್ನೂ ಓದಿ: ಬಿಎಸ್ವೈಗೆ ಕೈಕೊಟ್ಟ ಆಪ್ತ.. ಇಂದೇ BJP ತೊರೆದು ಮೋಹನ್ ಲಿಂಬಿಕಾಯಿ ಕಾಂಗ್ರೆಸ್ ಸೇರ್ಪಡೆ
ಕಾಂಗ್ರೆಸ್ ಪಾಳಯದಲ್ಲಿ ಅರವಿಂದ್ ಬೆಲ್ಲದ್ ಹಾಗೂ ಡಿಕೆ ಶಿವಕುಮಾರ್ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ ಅನ್ನೋ ವಿಚಾರ ಚರ್ಚೆಯಾಗುತ್ತಿದೆ. ಇಬ್ಬರೂ ನಾಯಕರು ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಪ್ರಬಲ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ತನಗೆ ಕಠಿಣ ಸವಾಲು ಎದುರಾಗುತ್ತದೆ. ಹೀಗಾಗಿ ತಮ್ಮ ಕ್ಷೇತ್ರದಲ್ಲಿ ಕಣಕ್ಕಿಳಿಯೋ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಅರವಿಂದ್ ಬೆಲ್ಲದ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬೆಲ್ಲದ್ ಮಾತಿಗೆ ಡಿ.ಕೆ ಶಿವಕುಮಾರ್ ನಕ್ಕು ಮುಂದೆ ನೋಡೋಣ ಎಂದಿದ್ದಾರಂತೆ.
ಬೆಲ್ಲದ್ ವಿರುದ್ಧ ಲಿಂಬಿಕಾಯಿ ಕಣಕ್ಕಿಳಿಯೋ ಸಾಧ್ಯತೆ
ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರ್ತಿರೋ ಮತ್ತೊಂದು ವಿಚಾರ ಏನಂದ್ರೆ, ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಅರವಿಂದ ಬೆಲ್ಲದ್ ಅವರನ್ನು ಈ ಬಾರಿ ಹೇಗಾದರೂ ಸೋಲಿಸಲೇಬೇಕು ಎಂದು ಕಾಂಗ್ರೆಸ್ ಮುಂದಾಗಿದೆ. ಹೀಗಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಅವರು ಇತ್ತೀಚಿಗೆ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೋಹನ್ ಲಿಂಬಿಕಾಯಿ ಅವರು ಕಣಕ್ಕಿಳಿದರೆ ಅರವಿಂದ ಬೆಲ್ಲದ್ ಗೆಲುವಿನ ಹಾದಿ ಕಠಿಣವಾಗಲಿದೆ. ಹೀಗಾಗಿ ಮೋಹನ್ ಲಿಂಬಿಕಾಯಿ ಅವರ ಬದಲಿಗೆ ಬೇರೆಯವರಿಗೆ ಟಿಕೆಟ್ ನೀಡುವಂತೆ ಡಿ.ಕೆ ಶಿವಕುಮಾರ್ ಅವರ ಬಳಿ ಅರವಿಂದ ಬೆಲ್ಲದ್ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post