ಭಾವನ ಮದುವೆಯಿಂದಾಗಿ ಆಸೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ದೂರ ಉಳಿದಿದ್ದ ಕ್ಯಾಪ್ಟನ್ ರೋಹಿತ್ ಶರ್ಮಾ ತಂಡಕ್ಕೆ ರಿಟರ್ನ್ ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ವೈ.ಎಸ್ ರಾಜಶೇಖರ್ ರೆಡ್ಡಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದ್ದು ತಂಡದ ಸಾರಥ್ಯವನ್ನ ರೋಹಿತ್ ವಹಿಸಲಿದ್ದಾರೆ.
ಕ್ಯಾಪ್ಟನ್ ರೋಹಿತ್ ಶರ್ಮಾ ಟೀಮ್ಗೆ ಮರಳಿದ್ದರಿಂದ ತಂಡಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ರೋಹಿತ್ ಆಗಮನದಿಂದ ಮೊದಲ ಪಂದ್ಯದಲ್ಲಿ ಶುಭ್ಮನ್ ಗಿಲ್ ಜೊತೆ ಓಪನರ್ ಆಗಿ ಕ್ರೀಸ್ಗೆ ಇಳಿದಿದ್ದ ಇಶಾನ್ ಕಿಶನ್ 2ನೇ ಮ್ಯಾಚ್ನಿಂದ ದೂರ ಉಳಿಯಲಿದ್ದಾರೆ ಎನ್ನಲಾಗ್ತಿದೆ. ಮೊದಲ ಪಂದ್ಯದಲ್ಲಿ ರೋಹಿತ್ ಹೊರಗುಳಿದಿದ್ದರಿಂದ ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ ಆಗಿ ತಂಡವನ್ನ ಮುನ್ನಡೆಸಿದ್ದರು. ಈಗ ಮತ್ತೆ ರೋಹಿತ್ ಸಾರಥ್ಯದಲ್ಲಿ ಆಟಗಾರರು ಕ್ರೀಡಾಂಗಣಕ್ಕೆ ಇಳಿಯಲಿಕ್ಕಿದ್ದಾರೆ.
ಮೊದಲ ಪಂದ್ಯ ಗೆದ್ದಿರೋ ಭಾರತ ತಂಡ ಸರಣಿ ವಶದ ಮೇಲೆ ಕಣ್ಣಿಟ್ಟಿದೆ. ಆಸ್ಟ್ರೇಲಿಯಾ ಸೋಲಿನಿಂದ ಪುಟಿದೇಳಲು ಎದುರು ನೋಡ್ತಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ದಿಂದ ಮುನ್ನಡೆ ಕಾಯ್ದುಕೊಂಡಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post