ಲಕ್ನೋ: 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಬರೋಬ್ಬರಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸ್ಪೆಷಲ್ ಪೋಕ್ಸೋ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಅಪ್ರಾಪ್ತ ಬಾಲಕಿ ಅಪಹರಣ ಮಾಡಿ ಅತ್ಯಾಚಾರ ಎಸಗಿದ್ದ 22 ವರ್ಷದ ಕಿಡಿಗೇಡಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ಆಗಿತ್ತು. ಈ ಕೇಸ್ ವಿಚಾರಣೆ ನಡೆಸಿದ ಕೋರ್ಟ್ ಈಗ 20 ವರ್ಷ ಜೈಲು ಶಿಕ್ಷೆ ನೀಡಿದೆ.
ಇನ್ನು, ಉತ್ತರ ಪ್ರದೇಶದ ಗೋಪಿ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಳೆದ ವರ್ಷ ಏಪ್ರಿಲ್ 29ನೇ ತಾರೀಕು 22 ವರ್ಷದ ಆರೋಪಿ ಅಜಯ್ ಕುಮಾರ್ ಯಾದವ್ ಎಂಬಾತ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿದ್ದ. ಬಾಲಕಿ ತಂದೆಯೇ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತಂದೆ ದೂರು ದಾಖಲಿಸಿದ ಮಾರನೇ ದಿನವೇ ಪೊಲೀಸ್ರು ಆರೋಪಿಯನ್ನು ಅರೆಸ್ಟ್ ಮಾಡಿದ್ದರು. ಬಳಿಕ ಈ ಕೇಸ್ ಸ್ಪೆಷಲ್ ಪೋಕ್ಸೋ ಕೋರ್ಟ್ ಮೆಟ್ಟಿಲೇರಿತ್ತು. ಘಟನೆ ನಡೆದ ಬರೋಬ್ಬರಿ 10 ತಿಂಗಳ ಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ಆದೇಶದ ಅನ್ವಯ 20 ವರ್ಷಗಳ ಕಾಲ ಜೈಲು ಶಿಕ್ಷೆ ಜತೆಗೆ 33 ಸಾವಿರ ದಂಡ ವಿಧಿಸಲಾಗಿದೆ. ಇದರಲ್ಲಿ 25 ಸಾವಿರ ರೂಪಾಯಿ ಸಂತ್ರಸ್ತೆಗೆ ಕೋರ್ಟ್ ನೀಡಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post