ಮೈಸೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಎಚ್ಚೆತ್ತ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ರಾಜ್ಯ ನಾಯಕರು ತಮ್ಮ ಪಕ್ಷದಲ್ಲಿ ನಡೆಯುತ್ತಿರೋ ಆಂತರಿಕ ಬಂಡಾಯದ ಶಮನಕ್ಕೆ ಮುಂದಾಗಿದ್ದಾರೆ. ಈಗಾಗಲೇ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಜೆಡಿಎಸ್ನಲ್ಲಿರೋ ಒಳ ಜಗಳ ತಡೆಗೆ ಹತ್ತಾರು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅಲ್ಲದೇ ರೆಬೆಲ್ ನಾಯಕರನ್ನು ಜೆಡಿಎಸ್ ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯೂ ಆಗಿದ್ದಾರೆ.
ಯಾವುದೇ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಹಳೇ ಮೈಸೂರು ಭಾಗದಲ್ಲಿ ಕೆಲಸ ಮಾಡಲೇಬೇಕು. ಕಾಂಗ್ರೆಸ್, ಜೆಡಿಎಸ್ ಬೇರುಗಳು ಹಳೇ ಮೈಸೂರು ಭಾಗದಲ್ಲಿ ಗಟ್ಟಿಯಾಗಿವೆ. ಮೈಸೂರು, ಮಂಡ್ಯ, ಹಾಸನದಲ್ಲಂತೂ ಕಾಂಗ್ರೆಸ್, ಜೆಡಿಎಸ್ ನಡುವೆ ನೇರಾ ಪೈಪೋಟಿ. ಹೀಗಾಗಿ ಈ ಎರಡು ಪಕ್ಷಗಳಿಗೂ ಟಕ್ಕರ್ ಕೊಡಲು ಬಿಜೆಪಿ ಆಪರೇಷನ್ ಕಮಲ ಶುರು ಮಾಡಿದೆ. ಇದರ ಭಾಗವಾಗಿ ಇತ್ತೀಚೆಗೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನೇ ಬಿಜೆಪಿ ಆಪರೇಷನ್ ಮಾಡಿದೆ. ಇದರ ಬೆನ್ನಲ್ಲೇ ಮಂಡ್ಯದ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರನ್ನು ಸೇರಿಸಿಕೊಳ್ಳಲು ಮುಂದಾಗಿದೆ. ಹೀಗಿರುವಾಗಲೇ ಎಂಎಲ್ಸಿ ಮಂಜೇಗೌಡ ಕಾಂಗ್ರೆಸ್ ಅಥವಾ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿತ್ತು. ಈಗ ಮಂಜೇಗೌಡರನ್ನು ಮನವೊಲಿಸುವಲ್ಲಿ ಜೆಡಿಎಸ್ ವರಿಷ್ಠರ ಪ್ಲಾನ್ ವರ್ಕೌಟ್ ಆಗಿದೆ.
ಇನ್ನು, ಈ ಸಂಬಂಧ ಮಾತಾಡಿದ ಎಂಎಲ್ಸಿ ಮಂಜೇಗೌಡ, ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡಲ್ಲ. ಮತ್ತೊಮ್ಮೆ ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ ದೇವೇಗೌಡರಿಗೆ ಟಿಕೆಟ್ ನೀಡಿದೆ. ಜಿ.ಟಿ ದೇವೇಗೌಡ ಅವರನ್ನು ಗೆಲ್ಲಿಸಿಕೊಂಡು ಬರೋದು ನನ್ನ ಜವಾಬ್ದಾರಿ ಎಂದಿದ್ದಾರೆ.
ನಾನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ದ್ರೋಹ ಮಾಡಲ್ಲ. ಎಚ್.ಡಿ ಕುಮಾರಸ್ವಾಮಿ ಅವರನ್ನು ಸಿಎಂ ಮಾಡುವುದೇ ನಮ್ಮ ಗುರಿ. ನಾವು ಜಿ.ಟಿ ದೇವೇಗೌಡರನ್ನು ಗೆಲ್ಲಿಸಲು ಅಗತ್ಯ ಕೆಲಸಗಳನ್ನು ಮಾಡುತ್ತೇವೆ. ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮುನಿಸು ಮರೆತ ಮಂಜೇಗೌಡ ಮತ್ತೆ ಜೆಡಿಎಸ್ಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post