ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋಗೆ ದಿನಾಂಕ ಹಾಗೂ ಸ್ಥಳ ನಿಗದಿಯಾಗಿದೆ. ಇದೇ ತಿಂಗಳ 25ರಂದು ಬೆಂಗಳೂರಿನ ಮಹಾದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ವೈಟ್ಫೀಲ್ಡ್ನಿಂದ ಕೆ.ಆರ್ ಪುರ ನಡುವೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗವನ್ನ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಇದೇ ದಿನ ಮಹಾದೇವಪುರ ಕ್ಷೇತ್ರದ ಸತ್ಯಸಾಯಿ ಆಶ್ರಮದಿಂದ ವೈಟ್‌ಫೀಲ್ಡ್ ಮೆಟ್ರೋ ಸ್ಟೇಷನ್ವರೆಗೆ 1.5 ಕಿ.ಮೀ ದೂರ ಮೋದಿ ರೋಡ್ ಶೋ ನಡೆಸಲಿದ್ದಾರೆ.
ಮುಂಬರುವ ಚುನಾವಣಾ ಕಾವು ಹೆಚ್ಚಾಗಿದೆ. ಕೇಂದ್ರ ನಾಯಕರು ಬಿಜಿಪಿಯತ್ತ ಮುಖ ಮಾಡುವ ಮೂಲಕ ಮತ್ತೆ ಕರ್ನಾಟಕದಲ್ಲಿ ಕಮಲ ಅರಳಿಸುವ ಪ್ಲಾನ್ ಮಾಡಿದ್ದಾರೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಆಗಾಗ ಕರ್ನಾಟಕಕ್ಕೆ ಎಂಟ್ರಿ ನೀಡುವ ಮೂಲಕ ರಾಜ್ಯದ ಜನರ ಮನವೊಲಿಸುವ ಪ್ಲಾನ್ ಮಾಡಿದ್ದಾರೆ. ಇದೇ 25ರಂದು ಕರುನಾಡಿಗೆ ಮೋದಿ ಆಗಮಿಸಲಿದ್ದಾರೆ. ರೋಡ್ ಶೋ ನಡೆಸಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post