ಬೆಂಗಳೂರು: ರೌಡಿಶೀಟರ್ ಹಣೆಪಟ್ಟಿ ಕಟ್ಟಿಕೊಂಡಿರೋ ಸೈಲೆಟ್ ಸುನೀಲ್‌ಗೆ ನಿನ್ನೆಯಷ್ಟೇ ಬಿಜೆಪಿ ಪಕ್ಷ ಶಾಕ್ ಕೊಟ್ಟಿತ್ತು. ಇದಾದ ಬೆನ್ನಲ್ಲೇ ನಾಗಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಫೈಟರ್ ರವಿಗೂ ಶಾಕಿಂಗ್ ನ್ಯೂಸ್ ಸಿಕ್ಕಿದೆ.
ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಸಿದ ಬಳಿಕ ಮಾಜಿ ಸಂಸದ L.R ಶಿವರಾಮೇಗೌಡರು ಬಿಜೆಪಿ ಪಕ್ಷ ಸೇರೋದು ಪಕ್ಕಾ ಆಗಿದೆ. ಇಂದು ಬೆಂಗಳೂರಿನಲ್ಲಿ ನಾಗಮಂಗಲ ನಿವಾಸಿಗಳ ಸಮಾವೇಶ ನಡೀತು. ಈ ಸಭೆಯಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ಶಿವರಾಮೇಗೌಡರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಭಾಗಿಯಾಗಿದ್ದರು. ಸಚಿವ ಮುನಿರತ್ನ ಇದ್ದ ವೇದಿಕೆಯಲ್ಲೇ ಎಲ್. ಆರ್. ಶಿವರಾಮೇಗೌಡ, ಇನ್ನು ಮೂರರಿಂದ ನಾಲ್ಕು ದಿನದಲ್ಲಿ ಬಿಜೆಪಿ ಸೇರುತ್ತೇನೆ. ನಾಗಮಂಗಲದಲ್ಲಿ ಬೃಹತ್ ಸಮಾವೇಶ ಮಾಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗ್ತೇನೆ. ಮಂಡ್ಯದ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ನಾನು ಶ್ರಮಿಸುತ್ತೇನೆ ಎಂದು ಘೋಷಣೆ ಮಾಡಿದರು.
L.R ಶಿವರಾಮೇಗೌಡರು ಈಗಾಗಲೇ ಬಿಜೆಪಿ ನಾಯಕರೊಂದಿಗೆ ಮಾತುಕತೆ ಮಾಡಿ ಮುಗಿಸಿದ್ದಾರೆ. ನಾಗಮಂಗಲದಲ್ಲಿ ಫೈಟರ್ ರವಿ ಬದಲಿಗೆ ಶಿವರಾಮೇಗೌಡರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: ಮೈಸೂರು ಭಾಗದಲ್ಲಿ ಬಿಜೆಪಿ, ಕಾಂಗ್ರೆಸ್ಗೆ ಬಿಗ್ ಶಾಕ್.. ವರ್ಕೌಟ್ ಆಯ್ತು HDK ಪ್ಲಾನ್
ಕೆಲ ತಿಂಗಳ ಹಿಂದಷ್ಟೇ ಫೈಟರ್ ರವಿ ಬಿಜೆಪಿ ಪಕ್ಷವನ್ನ ಸೇರಿದ್ದರು. ಫೈಟರ್ ರವಿ ಕಮಲ ಹಿಡಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸುದ್ದಿಯಾಗಿತ್ತು. ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಆಗಮಿಸಿದ ವೇಳೆ ಫೈಟರ್ ರವಿ ನಮಸ್ಕರಿಸಿದ್ದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿತ್ತು. ಈ ಎಲ್ಲಾ ಬೆಳವಣಿಗೆಗಳು ಬಿಜೆಪಿ ನಾಯಕರಿಗೆ ಇರಿಸು ಮುರಿಸು ತಂದಿತ್ತು. ವಿರೋಧಿಗಳ ಬಾಯಿ ಮುಚ್ಚಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ.
ನಾಗಮಂಗಲದಲ್ಲಿ ಫೈಟರ್ ರವಿ ಬದಲು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡರನ್ನ ಕರೆತಂದು ಬಿಜೆಪಿ ಟಿಕೆಟ್ ಕೊಡಲು ತಯಾರಿ ನಡೆಸಿದೆ. ಶಿವರಾಮೇಗೌಡರು ಬಿಜೆಪಿ ಸೇರ್ಪಡೆಯೊಂದಿಗೆ ಫೈಟರ್ ರವಿಗೆ ನಾಗಮಂಗಲ ಬಿಜೆಪಿ ಟಿಕೆಟ್ ಇಲ್ಲ ಎನ್ನುವ ಸ್ಪಷ್ಟ ಸಂದೇಶ ರವಾನೆ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post