ಌಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಕೆಡಿ’ ಸಿನಿಮಾದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡ ಧ್ರುವಾಗೆ ಎದುರಾಳಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ಸುದ್ದಿಯೆಂದರೆ ನಟಿ ಶಿಲ್ಪಾ ಶೆಟ್ಟಿ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಅಂದಹಾಗೆಯೇ ನಟಿ ಶಿಲ್ಪಾ ಶೆಟ್ಟಿ 17 ವರ್ಷಗಳ ಬಳಿಕ ಸ್ಯಾಂಡಲ್ವುಡ್ನತ್ತ ಕಂಬ್ಯಾಕ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅದರೊಂದಿಗೆ ನಟಿ ತಮ್ಮ ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ರು ಅನ್ನೋ ಸುದ್ದಿಯು ಮತ್ತೊಂದೆಡೆ ಹರಿದಾಡುತ್ತಿದೆ. ಆದರೆ ನಟಿ ಶಿಲ್ಪಾ ಶೆಟ್ಟಿ ಯಾವ ರೀತಿಯ ಪಾತ್ರ ನಿರ್ವಹಿಸ್ತಿದ್ದಾರೆ? ನಿಜವಾಗಿಯೂ ಕೆಡಿ ಸಿನಿಮಾದಲ್ಲಿ ನಟಿಸುತ್ತಿದ್ದಾರಾ? ಎನ್ನುವುದನ್ನ ಚಿತ್ರತಂಡ ಸಸ್ಪೆನ್ಸ್ ಆಗಿ ಇಟ್ಟಿದೆ.
17 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ಸ್ಯಾಂಡಲ್ವುಡ್ಗೆ!
ಶಿಲ್ಪಾ ಶೆಟ್ಟಿ ಅವರನ್ನು ಸ್ಯಾಂಡಲ್ವುಡ್ಗೆ ಪರಿಚಯಿಸಿದ್ದು ಕ್ರೇಜಿ ಸ್ಟಾರ್ ರವಿಚಂದ್ರನ್. 1998ರಲ್ಲಿ ತೆರೆಗೆ ಬಂದ ‘ಪ್ರೀತ್ಸೋದ್ ತಪ್ಪಾ‘ ಸಿನಿಮಾದಲ್ಲಿ ಮೊದಲು ಕಾಣಿಸಿಕೊಂಡರು. ಬಳಿಕ ಅವರದ್ದೇ 2003ರಲ್ಲಿ ಬಂದ ‘ಒಂದಾಗೋಣ ಬಾ‘ ಸಿನಿಮಾದಲ್ಲಿ ನಟಿಸಿದರು. ಇದಾದ ಬಳಿಕ 2005ರಲ್ಲಿ ಉಪೇಂದ್ರ ಜೊತೆಗೆ ‘ಆಟೋ ಶಂಕರ್‘ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ಚಿತ್ರಪ್ರೇಮಿಗಳೇ’ ಪ್ರತಿದಿನ ಸಂಜೆ 5.27ಕ್ಕೆ ನಿಮ್ಮ ನ್ಯೂಸ್ ಫಸ್ಟ್ ಚಾನೆಲ್‌ನಲ್ಲಿ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post