ಶಿವಮೊಗ್ಗ: ಆಜಾನ್ ಹಾಗೂ ಅಲ್ಲಾಹು ಬಗ್ಗೆ ಮಾಜಿ ಸಚಿವ ಈಶ್ವರಪ್ಪ ನೀಡಿದ್ದ ಹೇಳಿಕೆ ಖಂಡಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಜಾನ್ ಎಂದು ಕೂಗಿ ಉದ್ಧಟತನ ತೋರಿದ್ದಾನೆ. ಈ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಕಷ್ಟು ವೈರಲ್ ಆಗಿದೆ.
ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಆಜಾನ್ ಕೂಗದಂತೆ ಪೊಲೀಸರು ವಿರೋಧಿಸಿದ್ದಾರೆ. ಆದರೆ, ಪ್ರತಿಭಟನಾಕಾರರು ಮಣಿದಿಲ್ಲ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ. ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತಾಡಿದ್ದಲ್ಲ, ಅಲ್ಲಾಹು ಬಗ್ಗೆ ಮಾತನಾಡಿರೋದು ಎಂದು ಮತ್ತೊಬ್ಬ ಯುವಕ ಹೇಳಿದ್ದಾನೆ. ಇದಾದ ನಂತರ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ಕಳುಹಿಸಿದ್ದಾರೆ.
ಕಚೇರಿ ಮೇಲೆ ಆಜಾನ್ ಕೂಗಿದ ಯುವಕ ಯಾರು..?
ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಆಜಾನ್ ಕೂಗಿದ ಯುವಕ ಮೌಸೀನ್ (27) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾರ್ಚ್ 17 ರಂದು ಸಂಜೆ ಅಜಾನ್ ಕೂಗಿದ್ದನು. ಹೀಗಾಗಿ ಈತನ ವಿರುದ್ಧ ಸಿಆರ್ಪಿಸಿ 107 ಅಡಿ ಪ್ರಕರಣ ದಾಖಲು ಮಾಡಲಾಗಿತ್ತು. ಬಳಿಕ ಠಾಣಾ ಜಾಮೀನಿನ ಮೇಲೆ ಜಯನಗರದ ಠಾಣೆಯ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post