ಬೆಂಗಳೂರು: ಪೊಲೀಸರೇ ಆರೋಪಿಯನ್ನ ಕಿಡ್ನಾಪ್ ಮಾಡಿ ಲಕ್ಷ ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿರುವ ಆರೋಪ ಕೇಳಿ ಬಂದಿದೆ.
ಹುಲಿ ಉಗುರು ಮತ್ತು ಚರ್ಮವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಾಗಲೂರು ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಆರೋಪಿ ತಲೆಗೆ ಗನ್ ಇಟ್ಟು ಹಣ ಕೊಡುವಂತೆ ಅವಾಜ್ ಹಾಕಿದ್ದಾರಂತೆ. ನಂತರ ಆರೋಪಿ ಕಡೆಯವರಿಗೆ ಕರೆ ಮಾಡಿಸಿ 40 ಲಕ್ಷ ಹಣವನ್ನು ತಂದುಕೊಡುವಂತೆ ಬೇಡಿಕೆ ಇಟ್ಟಿದ್ದಾರಂತೆ.
ಇದನ್ನು ಓದಿ: KSRTC ಬಸ್, ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು
ಇನ್ನು ಈ ಸಂಬಂಧ ಮಾರತಹಳ್ಳಿ ಠಾಣೆ ಪಿಎಸ್ಐ ರಂಗೇಶ್ ಮತ್ತು ಹೆಡ್ ಕಾನ್ಸ್‌ಟೇಬಲ್ ಹರೀಶ್ರನ್ನ ಬಂಧಿಸುವಂತೆ ಕಮಿಷನರ್ ಪ್ರತಾಪ್ ರೆಡ್ಡಿ ಸೂಚನೆ ಕೊಟ್ಟಿದ್ದಾರೆ. ಸದ್ಯ ತಲೆಮರೆಸಿಕೊಂಡಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post