ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ನಟ ಚೇತನ್ಗೆ ಜಾಮೀನು ಸಿಕ್ಕಿದೆ. ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒಬ್ಬರು ಭದ್ರತೆ ನೀಡುವಂತೆ ನ್ಯಾಯಾಧೀಶೆ ಲತಾ ಸೂಚನೆ ನೀಡಿದ್ದಾರೆ.
ಹಿಂಧೂ ಧರ್ಮದ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡಿದ್ದ ಚೇತನ್ ಅವರನ್ನು ಮಾರ್ಚ್ 21 ರಂದು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಂಧನ ಆಗ್ತಿದ್ದಂತೆ ಚೇತನ್ ಪರ ವಕೀಲರು ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜಾಮೀನು ಅರ್ಜಿ ವಿಚಾರಣೆಯನ್ನು ಇವತ್ತಿಗೆ ಮುಂದೂಡಿತ್ತು.
ಚೇತನ್ ಹೇಳಿಕೆ ಏನಾಗಿತ್ತು..?
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು. ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮಭೂಮಿ ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ
ಚೇತನ್ ಅಹಿಂಸಾ, ನಟ
ವಿಶೇಷ ಸೂಚನೆ: ಸಿನಿಮಾ ಲೋಕದ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ಚಿತ್ರಪ್ರೇಮಿಗಳೇ’ ಪ್ರತಿದಿನ ಸಂಜೆ 5.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post