ಗದಗ: ರಾಜ್ಯ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಚಾಣ ಸೌಂಡು ಮಾಡುತ್ತಿದೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಹಣವನ್ನು ಅಧಿಕಾರಿಗಳು ಸೆರೆಹಿಡಿದಿರುವ ಸುದ್ದಿಯನ್ನ ಕೇಳಿರಬಹುದು. ಅದರಂತೆಯೇ ಇದೀಗ ಬೆಟಗೇರಿ ಚೆಕ್ ಪೋಸ್ಟ್ ನಲ್ಲಿ ಮತ್ತೆ 1.43 ಲಕ್ಷ ಹಣ ಸಿಕ್ಕಿದ್ದು, ಅಧಿಕಾರಿಗಳು ಹಣ ಸಾಗಿಸುತ್ತಿದ್ದ ವ್ಯಕ್ತಿ ಮತ್ತು ಹಣವನ್ನು ಸೀಜ್ ಮಾಡಿದ್ದಾರೆ.
ಯಾವುದೇ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಾಟ ಮಾಡ್ತಿದ್ದ ವ್ಯಕ್ತಿಯನ್ನು ಪೊಲೀಸರು ಹಿಡಿದಿದ್ದಾರೆ. ಆತನಿಂದ 1.43 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಾರೆ. ಗಜೇಂದ್ರಗಡದಿಂದ ಹುಬ್ಬಳ್ಳಿಗೆ ಹೊರಟಿದ್ದ ಕಾರಿನಲ್ಲಿ ಹಣ ಪತ್ತೆಯಾಗಿದೆ.
ಇನ್ನು ಪೊಲೀಸರು ಕಾರು ಮತ್ತು ಮಾಲೀಕನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post