ಹಾಸನ: ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ HD ಕುಮಾರಸ್ವಾಮಿ ಅವರು, ಜೈನ ಪೀಠದ ಜಗದ್ಗುರುಗಳಾದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಗಲಿದ ವಿಷಯ ಕೇಳಿ ತೀವ್ರ ಆಘಾತ ಉಂಟಾಗಿದೆ. ಶ್ರೀ ಭಗವಾನ್ ಬಾಹುಬಲಿ ಅವರ ಶಾಂತಿ, ಅಹಿಂಸೆ, ಸಹನೆ ತತ್ವಗಳನ್ನು ಪಸರಿಸುತ್ತಾ ಜನರಲ್ಲಿ ಅರಿವಿನ ಬೆಳಕು ಮೂಡಿಸಿದ್ದರು. ಪರಮಪೂಜ್ಯರು ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಮಠದ ಭಕ್ತರು, ಜನರಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Breaking: ಶ್ರವಣಬೆಳಗೊಳದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ
ಇವತ್ತು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಹೀಗಾಗಿ ವೈದ್ಯರು ಮಠಕ್ಕೆ ಆಗಮಿಸಿ ಚಿಕಿತ್ಸೆ ನೀಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನರಾಗಿದ್ದಾರೆ.
ಶ್ರವಣಬೆಳಗೊಳದ ಶ್ರೀ ಜೈನಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ಅಗಲಿದ ವಿಷಯ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಶ್ರೀ ಭಗವಾನ್ ಬಾಹುಬಲಿ ಅವರ ಶಾಂತಿ, ಅಹಿಂಸೆ, ಸಹನೆ ತತ್ವಗಳನ್ನು ಪಸರಿಸುತ್ತಾ ಜನರಲ್ಲಿ ಅರಿವಿನ ಬೆಳಕು ಮೂಡಿಸಿದ್ದ ಪರಮಪೂಜ್ಯರು ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದರು.1/2 pic.twitter.com/dyBg4PfF8U
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 23, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post