ಬೆಂಗಳೂರು: KSRTC, BMTC ಪ್ರಯಾಣಿಕರು, ರಾಜ್ಯಾದ್ಯಂತ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ. ನಾಳೆ ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ.
ಮುಷ್ಕರದಿಂದ ಸಾರ್ವಜನಿಕರ ಸಂಚಾರಕ್ಕೆ ಮತ್ತು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
KSRTC, BMTC, ವಾಯವ್ಯ & ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ನೌಕರರು ನಾಳೆ ಅಂದ್ರೆ ಮಾರ್ಚ್ 24ರಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದರು. ನೌಕರರ ಸಮಾನ ಮನಸ್ಕರ ವೇದಿಕೆ ಮೂಲಕ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೆಚ್.ಎಂ. ವೆಂಕಟೇಶ್ ಎಂಬುವವರು ಹೈಕೋರ್ಟ್ಗೆ PIL ಹಾಕಿದ್ದರು.
ಇದನ್ನೂ ಓದಿ: IPL 2023ರ ಉದ್ಘಾಟನೆಗೆ ಸೊಂಟ ಬಳುಕಿಸಲಿದ್ದಾರೆ ‘ಜಿಮಿಕ್ಕಿ ಪೊಣ್ಣು‘! ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡೋದು ನಿಜಾನಾ?
PIL ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕಳೆದ ಮಾರ್ಚ್ 20 ರಂದು ಕಾರ್ಮಿಕ ಇಲಾಖೆ ಆಯುಕ್ತರು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ಏಪ್ರಿಲ್ 6ರಂದು ಸಾರಿಗೆ ನೌಕರರೊಂದಿಗೆ ಕಾರ್ಮಿಕರ ಆಯುಕ್ತರು ಸಮಾಲೋಚನಾ ಸಭೆ ನಿಗದಿಪಡಿಸಿದ್ದಾರೆ. ಆದ್ದರಿಂದ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post