ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2A ಮೀಸಲಾತಿ ಹೋರಾಟದ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಚುನಾವಣಾ ಹೊಸ್ತಿಲಲ್ಲಿ ಹೈಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ತೆರವುಗೊಳಿಸಿದೆ. ಇದರಿಂದ ಲಿಂಗಾಯತ ಪಂಚಮಸಾಲಿಗೆ 2C, 2D ಮೀಸಲಾತಿ ನೀಡುವ ಸರ್ಕಾರದ ಪ್ರಯತ್ನಕ್ಕಿದ್ದ ಅಡ್ಡಿಯೂ ನಿವಾರಣೆಯಾಗಿದೆ.
ಲಿಂಗಾಯತ ಪಂಚಮಸಾಲಿಗೆ 2A ಮೀಸಲಾತಿ ನೀಡದಂತೆ ರಾಘವೇಂದ್ರ ಡಿ.ಜಿ. ಎಂಬುವವರು PIL ಸಲ್ಲಿಸಿದ್ದರು. ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ 2A ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ತೆರವುಗೊಳಿಸಲಾಗಿದೆ. ಹೀಗಾಗಿ ಲಿಂಗಾಯತ ಪಂಚಮಸಾಲಿಗೆ 2C, 2D ಮೀಸಲಾತಿ ನೀಡುವ ಸಿಎಂ ಬೊಮ್ಮಾಯಿ ಸರ್ಕಾರದ ಪ್ರಯತ್ನಕ್ಕಿದ್ದ ಅಡ್ಡಿಯೂ ಬಗೆಹರಿದಿದೆ.
ಇದನ್ನೂ ಓದಿ: ‘ಕಳ್ಳರೆಲ್ಲರೂ ಮೋದಿ ಸರ್ ನೇಮ್ ಹೊಂದಿರುತ್ತಾರೆ’- ಮಾನನಷ್ಟ ಕೇಸ್‌ನಲ್ಲಿ ರಾಹುಲ್ ಗಾಂಧಿ ಅಪರಾಧಿ
ಲಿಂಗಾಯತ ಪಂಚಮಸಾಲಿಗೆ 2A ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಆದೇಶಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ಹೈಕೋರ್ಟ್ ಸೂಚಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post