IPL 2023ರ ಆರಂಭಕ್ಕೆ ಇನ್ನೇನು ಕೆಲವೇ ದಿನಗಳ ಬಾಕಿ ಇದೆ. ಇದೇ ಮಾರ್ಚ್ 31ರಂದು ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳಲಿದೆ. ಹೀಗಾಗಿ ಬಹುನಿರೀಕ್ಷಿತ ಈ ಜಿದ್ದಾ-ಜಿದ್ದಿಗಾಗಿ ಅಭಿಮಾನಿಗಳು ಕಾತುರರಾಗಿದ್ದಾರೆ. ತಂಡದ ಮೈದಾನ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಹಾತೊರೆಯುತ್ತಿದ್ದಾರೆ. ಇದೀಗ ಶುಭ ಸುದ್ದಿ ಎಂಬಂತೆ ಐಪಿಎಲ್ ಉದ್ಘಾಟನೆಗೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದು, ಡ್ಯಾನ್ಸ್ ಮಾಡಲಿದ್ದಾರೆ ಎಂಬ ವರದಿಯೊಂದು ಹೊರಬಿದ್ದಿದೆ.
ಅಂದಹಾಗೆಯೇ ಇಂದು 16ನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆಗಿದೆ. ಬರೋಬ್ಬರಿ 4 ವರ್ಷಗಳ ಬಳಿಕ ಉದ್ಘಾಟನಾ ಸಮಾರಂಭ ಆಯೋಜಿಸುತ್ತಿದೆ. ಹೀಗಿರುವಾಗ ವಿವಿಧ ತಂಡಗಳ ಹಣಾಹಣಿಗಾಗಿ ಭಾರತೀಯ ಕ್ರಿಕೆಟ್ ನಿಗಮ ಮಂಡಳಿ ಸಕಲ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಅದರಂತೆಯೇ ಉದ್ಘಾಟನಾ ದಿನದಂದು ರಶ್ಮಿಕಾ ಮಂದಣ್ಣ ಭರ್ಜರಿ ಡ್ಯಾನ್ಸ್ ಮಾಡುವ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ರಶ್ಮಿಕಾ ಮಂದಣ್ಣ ಮಾತ್ರವಲ್ಲ ಇನ್ನೂ ಹಲವರಿದ್ದಾರೆ..
ಐಪಿಎಲ್ 2023ರ ಉದ್ಘಾಟನಾ ಕಾರ್ಯಕ್ರಮದಂದು ರಶ್ಮಿಕಾ ಮಂದಣ್ಣ ಮಾತ್ರವಲ್ಲದೆ, ಮಿಲ್ಕಿ ಬ್ಯೂಟಿ ತಮನ್ನಾ ಕೂಡ ವೇದಿಕೆ ಹಂಚಿಕೊಳ್ಳಲಿದ್ದು, ಡ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೊತೆಗೆ ಬಾಲಿವುಡ್ ಖ್ಯಾತ ಹಾಡುಗಾರ ಅರಿಜಿತ್ ಸಿಂಗ್ ಈ ಕಾರ್ಯಕ್ರಮದಲ್ಲಿ ಹಾಡು ಹಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ಚಿತ್ರಪ್ರೇಮಿಗಳೇ’ ಪ್ರತಿದಿನ ಸಂಜೆ 5.27ಕ್ಕೆ ನಿಮ್ಮ ನ್ಯೂಸ್ ಫಸ್ಟ್ ಚಾನೆಲ್‌ನಲ್ಲಿ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post