ಮೈಸೂರು: ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭಕ್ಕೆ ಸಿದ್ಧತೆಗಳು ಭರ್ಜರಿಯಾಗಿದೆ. ಇವತ್ತಿನ ಸಮಾವೇಶದಲ್ಲಿ ಶಕ್ತಿ ಪ್ರದರ್ಶನಕ್ಕೆ ಜೆಡಿಎಸ್ ನಾಯಕರು ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ. ಪಂಚರತ್ನ ಯಾತ್ರೆಯ ಇವತ್ತಿನ ಸಮಾರಂಭದಲ್ಲಿ ಪ್ರಮುಖ ಆಕರ್ಷಣೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.
ಹೆಚ್.ಡಿ ದೇವೇಗೌಡರು ಇಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ. KRS, ಹಿನಕಲ್, ಬೋಗಾದಿ, ಶ್ರೀರಾಂಪುರ ಮಾರ್ಗವಾಗಿ ರಿಂಗ್ ರಸ್ತೆಯಲ್ಲಿ ದೇವೇಗೌಡರು ರೋಡ್ ಶೋ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಚಾಮುಂಡೇಶ್ವರಿ ಕ್ಷೇತ್ರದ ಉತ್ತನಹಳ್ಳಿಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರೇ ಪ್ರಮುಖ ಆಕರ್ಷಣೆ. ಹೀಗಾಗಿ ದೇವೇಗೌಡರಿಗಾಗಿ ಇಮ್ಮಡಿ ಪುಲಿಕೇಶಿ ಧರಿಸುತ್ತಿದ್ದ ಮಾದರಿಯ ಪೇಟ ತಯಾರಾಗಿದೆ. ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಕಲಾವಿದ ನಂದನ್ ಈ ವಿಶೇಷ ಪೇಟ ರೆಡಿ ಮಾಡಿದ್ದಾರೆ.
ಇದನ್ನೂ ಓದಿ: ಚುನಾವಣಾ ರಣರಂಗಕ್ಕೆ ದೇವೇಗೌಡರ ಗ್ರ್ಯಾಂಡ್ ಎಂಟ್ರಿ; ಇಂದು ದಳಪತಿಗಳ ಬೃಹತ್ ಶಕ್ತಿ ಪ್ರದರ್ಶನ
ಇಮ್ಮಡಿ ಪುಲಿಕೇಶಿ ಧರಿಸುತ್ತಿದ್ದ ಮಾದರಿಯ ಪೇಟ ಅತ್ಯಂತ ಆಕರ್ಷಣೀಯವಾಗಿದೆ. ಕಲಾವಿದ ನಂದನ್ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಂಪೇಗೌಡ ಪೇಟ ಮಾದರಿ ತಯಾರಿಸಿದ್ರು. ಪೇಟದ ಜೊತೆಗೆ HD ದೇವೇಗೌಡರಿಗೆ ರೋಸ್‌ವುಡ್, ಸ್ವರ್ಣಲೇಪನದಿಂದ ತಯಾರಾದ ನೇಗಿಲನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿಗಾಗಿ ಬೆಳ್ಳಿ ಪೆನ್ ನೀಡಲು ಅಭಿಮಾನಿಯೊಬ್ಬರು ಮುಂದಾಗಿದ್ದಾರೆ.
ದಳಪತಿಗಳಿಗೆ ಅದೃಷ್ಟ ಒಲಿಯುವ ನಿರೀಕ್ಷೆ
2018ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಮಾರ ಪರ್ವ ಸಮಾವೇಶ ಆಯೋಜಿಸಿದ್ದರು. ನಂತರ ಅವರಿಗೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗುವ ಅವಕಾಶ ಒಲಿದು ಬಂದಿತ್ತು. ಇದೀಗ ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಸಮಾರೋಪ ಸಮಾರಂಭ ನಡೆಯುತ್ತಿದೆ. ಅದೃಷ್ಟ ಒಲಿಯುವ ನಿರೀಕ್ಷೆಯೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಜೆಡಿಎಸ್ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post