ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಸಂಚರಿಸಿರೋ ಜೆಡಿಎಸ್ ಪಂಚರತ್ನ ಯಾತ್ರೆ ಫೈನಲ್ ಹಂತಕ್ಕೆ ಬಂದು ತಲುಪಿದೆ. ಇಂದು ಮೈಸೂರಿನಲ್ಲಿ ಬೃಹತ್ ಸಮಾರೋಪ ಸಮಾವೇಶ ನಡೆಯಲಿದೆ. ದಳಪತಿಗಳ ಶಕ್ತಿ ಪ್ರದರ್ಶನಕ್ಕೆ ಜನ ಸಾಗರವೇ ಹರಿದುಬರೋ ನಿರೀಕ್ಷೆ ಇದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬೃಹತ್ ಸಮಾವೇಶದಲ್ಲಿ ಭಾಗಿಯಾಗ್ತಿರೋದು ಸೆಂಟರ್ ಆಫ್ ಅಟ್ರ್ಯಾಕ್ಷನ್.
ಪಂಚರತ್ನ ಯಾತ್ರೆ.. ಶತಾಯಗತಾಯವಾಗಿ ರಾಜ್ಯದಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೇರಬೇಕು ಅಂತಾ ದಳಪತಿಗಳು, ಜನರನ್ನ ಐದು ಅಂಶಗಳ ಮೂಲಕ ಮತ ಕೇಳ್ತಿದ್ದಾರೆ. ಅದರ ಭಾಗವಾಗಿ ಕೈಗೊಂಡ ಯಾತ್ರೆಯೇ ಪಂಚರತ್ನ ಯಾತ್ರೆ. ಮೂರು ತಿಂಗಳುಗಳ ಕಾಲ ದಳಪತಿಗಳ ಪಂಚರತ್ನ ಸಂಚಾರ, ಲಕ್ಷಾಂತರ ಜನರನ್ನ ತಲುಪಿದೆ. ರಾಜ್ಯದ ಮೂಲೆ ಮೂಲೆಗೂ ಸಂಚರಿಸಿ ಸಂಚಲನ ಸೃಷ್ಟಿಸಿದ್ದ ಕುಮಾರಸ್ವಾಮಿಯವರ ಪಂಚರತ್ನ ರಥಯಾತ್ರೆ ಅಂತಿಮ ಘಟಕ್ಕೆ ಬಂದು ನಿಂತಿದೆ. ಪಂಚತ್ನಯಾತ್ರೆ ಸಮಾರೋಪ ಸಮಾವೇಶ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಈಗಾಗಲೇ ಮೈಸೂರಿನಲ್ಲಿ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದ ಸಿದ್ಧತೆ ಬಹುತೇಕ ಪೂರ್ಣವಾಗಿದೆ. ಚಾಮುಂಡಿಬೆಟ್ಟ ತಪ್ಪಲಿನ ಉತ್ತನಹಳ್ಳಿಯಲ್ಲಿ ಸಮಾವೇಶ ನಡೆಯಲಿದ್ದು, ಸಂಜೆ 4 ಗಂಟೆಗೆ ದಳಬಳಗ ರಣಕಹಳೆ ಮೊಳಗಿಸಿ ಶಕ್ತಿ ಪ್ರದರ್ಶನ ನಡೆಸಲಿದೆ.
ಇದನ್ನೂ ಓದಿ: ನುಡಿದಂತೆ ನಡೆದ ಪ್ರಕಾಶ್ ರೈ, ಯಶ್.. ಅಪ್ಪು ಹೆಸರಿನಲ್ಲಿ ಆ್ಯಂಬುಲೆನ್ಸ್ ಸೇವೆ ಆರಂಭ
ಸಮಾರಂಭಕ್ಕೂ ಮೊದಲು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆ ಬಳಿಯ ರಿಂಗ್ ರಸ್ತೆಯಿಂದ ಬೃಹತ್ ರೋಡ್ ಶೋ ನಡೆಯಲಿದೆ. ಈ ರೋಡ್ ಶೋನಲ್ಲಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ಅಭ್ಯರ್ಥಿಗಳು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: Watch: ಮೋದಿ ರೋಡ್ ಶೋ ನಡುವೆ ಯುವಕನ ಎಂಟ್ರಿ! ಭದ್ರತಾ ಲೋಪದ ಬಗ್ಗೆ ದಾವಣಗೆರೆ ಎಸ್ಪಿ ಏನಂದ್ರು?
ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದ ವೇದಿಕೆಗೆ ಝಗಮಗಿಸುವ ವಿದ್ಯುತ್ ಬೆಳಕಿನ ಅಲಂಕಾರ ಮಾಡಲಾಗಿದೆ. ವೇದಿಕೆಗೆ ಅಚ್ಚುಕಟ್ಟಾದ ವಿದ್ಯುತ್ ದೀಪದ ಮೆರಗು ನೀಡಲಾಗಿದ್ದು, ಮೈದಾನದ ಯಾವುದೇ ಭಾಗದಿಂದಲೂ ವೇದಿಕೆ ಕಾರ್ಯಕ್ರಮ ನೋಡಲು ಸಾಧ್ಯ ಆಗುವಂತೆ ಬೃಹತ್ LED ಪರದೆಗಳನ್ನು ಅಳವಡಿಸಲಾಗಿದೆ. ವಿಶಾಲ ವೇದಿಕೆಗೆ ಡಿಜಿಟಲ್ ಸ್ಕ್ರೀನ್ ಬ್ಯಾನರ್ ಅಳವಡಿಸಲಾಗಿದ್ದು, ಅದರಲ್ಲಿ ಪಂಚರತ್ನ ಕಾರ್ಯಕ್ರಮಗಳು ನಿರಂತರವಾಗಿ ಮೂಡಿಬರುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಮೈದಾನದ ತುಂಬೆಲ್ಲಾ ಕಟೌಟ್ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ. ರಾಜ್ಯದ ಮೂಲೆ ಮೂಲೆಯಿಂದ ಜನ ಬರ್ತಾರೆ ಅಂತಾ ಶಾಸಕ ಜಿ.ಟಿ.ದೇವೇಗೌಡರವರು ತಿಳಿಸಿದ್ದಾರೆ.
ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಅದ್ಧೂರಿಯಾಗಿ ನಡೆಯಲಿದ್ದು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಮೂಲಕ ಕಾರ್ಯಕರ್ತರಿಗೆ ದೊಡ್ಡ ಸಂದೇಶ ರವಾನೆಗೆ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಏನದು ಸಂದೇಶ ಸದ್ಯಕ್ಕೆ ಕುತೂಹಲ.
ಮೈಸೂರು ನಗರದಲ್ಲಿ ನಾಳೆ ಪಂಚರತ್ನ ರಥಯಾತ್ರೆಯ ಬೃಹತ್ ಸಮಾರೋಪ ಸಮಾವೇಶ ನಡೆಯುವ ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಬಳಿಯ ಮೈದಾನಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲನೆ ನಡೆಸಲಾಯಿತು.1/2#ಪಂಚರತ್ನ_ರಥಯಾತ್ರೆ #ಮೈಸೂರು pic.twitter.com/DJ8GdmXUGM
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 25, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post