ಶಿವಮೊಗ್ಗ: ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ವರ್ಗೀಕರಣ ರಾಜ್ಯದಲ್ಲಿ ಅತಿ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಂಜಾರ ಸಮುದಾಯದ ಹೋರಾಟಕ್ಕೆ ಶಿಕಾರಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, 144 ಸೆಕ್ಷನ್ ಜಾರಿಯಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಒಳ ಮೀಸಲಾತಿಯ ವರ್ಗೀಕರಣಕ್ಕೆ ಶಿಫಾರಸು ಮಾಡುವುದಾಗಿ ಘೋಷಿಸಿದೆ. ರಾಜ್ಯ ಸರ್ಕಾರದ ಈ ಕ್ರಮ ವಿರೋಧಿಸಿ ತಾಲೂಕು ಬಂಜಾರ ಸಮಾಜದ ವತಿಯಿಂದ ಶಿಕಾರಿಪುರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ರೊಚ್ಚಿಗೆದ್ದ ಪ್ರತಿಭಟನಾಕಾರರು ಮಾಜಿ ಸಿಎಂ ಯಡಿಯೂರಪ್ಪನವರ ಶಿಕಾರಿಪುರ ಮನೆಗೆ ಮುತ್ತಿಗೆ ಹಾಕಿದರು. ಮನೆಯ ಕಿಟಕಿ, ಗಾಜುಗಳಿಗೆ ಕಲ್ಲು ತೂರಾಟವನ್ನು ನಡೆಸಿದರು.
ಬಂಜಾರ ಸಮಾಜದ ಹೋರಾಟಗಾರರು ಬ್ಯಾರಿಕೇಡ್‌ಗಳನ್ನ ಧ್ವಂಸ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ. ತಳ್ಳಾಟ, ನೂಕಾಟದಲ್ಲಿ ಕೆಲವರು ಅಸ್ವಸ್ಥರಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಶಿಕಾರಿಪುರ ಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ: BREAKING: ಒಳ ಮೀಸಲಾತಿ ವಿರುದ್ಧ ರೊಚ್ಚಿಗೆದ್ದ ಬಂಜಾರ ಸಮುದಾಯ; BSY ನಿವಾಸದ ಮೇಲೆ ಕಲ್ಲು ತೂರಾಟ
ಒಳಮೀಸಲಾತಿಯ ವರ್ಗೀಕರಣ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಹೋರಾಟಗಾರರು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಸ್ಥರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಅಂಗವಾಗಿ ಶಿಕಾರಿಪುರ ತಾಲೂಕಿನಾದ್ಯಂತ ಸೀರೆ ವಿತರಣೆ ಮಾಡಲಾಗಿತ್ತು. ಆ ಸೀರೆಗಳನ್ನು ಪ್ರತಿಭಟನೆಗೆ ತೆಗೆದುಕೊಂಡು ಬಂದಿದ್ದ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post