ಇಂದು ನರೇಂದ್ರ ಮೋದಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಕ್ವಾಲಿಫೈಯರ್ 2 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್, ಐದು ಬಾರಿ ಕಪ್ ಗೆದ್ದಿರೋ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ.
ಇಂದು ಟಾಸ್ ಗೆದ್ದ ಮುಂಬೈ ಕ್ಯಾಪ್ಟನ್ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವು ಫಸ್ಟ್ ಬ್ಯಾಟಿಂಗ್ ಮಾಡಲಿದೆ. ಇಂದು ಗೆದ್ದ ತಂಡ ಫೈನಲ್ಗೆ ಹೋಗಲಿದೆ.
ಈ ಹಿಂದೆ ಕ್ವಾಲಿಪೈಯರ್-1 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿದ್ದ ಎಂಎಸ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಫೈನಲ್ ಪ್ರವೇಶಿಸಿದೆ. ಇಂದಿನ ವಿಜೇತರು ಭಾನುವಾರ ಇದೇ ಮೈದಾನದಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ನಡೆಯೋ ಫೈನಲ್ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಹೋರಾಡಲಿದ್ದಾರೆ.
ಉಭಯ ತಂಡಗಳ ಪ್ಲೇಯಿಂಗ್ ಎಲೆವೆನ್ ಹೀಗಿದೆ..!
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆಂಡಾಫ್.
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮುಹಮ್ಮದ್ ಶಮಿ, ಮೋಹಿತ್ ಶರ್ಮಾ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post