/newsfirstlive-kannada/media/post_attachments/wp-content/uploads/2025/03/EXAM-flaws-1.jpg)
ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ (CISCE) ಐಸಿಎಸ್‌ಇ 10ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಈ ಬಾರಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಇದನ್ನೂ ಓದಿ: 35 ಬಾಲ್ನಲ್ಲಿ 100 ರನ್.. ವೈಭವ್ ಸೂರ್ಯವಂಶಿಗೆ ಕೊಹ್ಲಿ ಕಿವಿ.. ಏನಂದ್ರು ಗೊತ್ತಾ..?
ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಐಸಿಎಸ್‌ಇ ಯ ಅಧಿಕೃತ ವೆಬ್‌ಸೈಟ್ cisce.org ನಲ್ಲಿ ಫಲಿತಾಂಶ ಪರಿಶೀಲಿಸಬಹುದು. results.cisce.org ಈ ವೆಬ್‌ಸೈಟ್‌ನಲ್ಲೂ ಫಲಿತಾಂಶ ನೋಡಬಹುದು.
ಈ ಬಾರಿ ಶೇ 99.09 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಐಸಿಎಸ್‌ಇ 10ನೇ ತರಗತಿ ಹಾಗೂ ಐಎಸ್‌ಸಿ 12ನೇ ತರಗತಿ ಶೇ 99.02 ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಫೆಬ್ರವರಿ 18ರಂದು ಪ್ರಾರಂಭವಾಗಿ ಮಾರ್ಚ್ 27ಕ್ಕೆ ಪರೀಕ್ಷೆಗಳು ಮುಕ್ತಾಯಗೊಂಡಿದ್ದವು. 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 13ರಂದು ಪ್ರಾರಂಭವಾಗಿ ಏಪ್ರಿಲ್ 5ರಂದು ಮುಕ್ತಾಯ ಆಗಿದ್ದವು.
ರಿಸಲ್ಟ್ ನೋಡುವುದು ಹೇಗೆ?
https://tmgr-98fkj2l4xmvz7q2wa9pl.trafficmanager.net/
- results.cisce.org ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲನೆಗೆ ಅವಕಾಶ
- ನಂತರ ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಎಂದಿರುವಲ್ಲಿ ಕ್ಲಿಕ್ ಮಾಡಿ.
- ಅಲ್ಲಿ ನಿಮ್ಮ ಯೂನಿಕ್ ಐಡಿ, ಇಂಡೆಕ್ಸ್ ನಂಬರ್ ಹಾಗೂ ಕ್ಯಾಪ್ಚಾ ಕೋಡ್ ಎಂಟರ್ ಮಾಡಿ.
- ನಂತರ ರಿಸ್ಟಲ್ ಡಿಸ್‌ಪ್ಲೇ ಮೇಲೆ ಬಂದಿರುತ್ತದೆ.
- ಅದನ್ನು ಡೌನ್‌ಲೋಡ್ ಹಾಗೂ ಸೇವ್ ಮಾಡಿಕೊಳ್ಳಬಹುದು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ