newsfirstkannada.com

ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆ; ರಸ್ತೆ ಮಧ್ಯೆ ಯುವಕ ದಾರುಣ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ

Share :

Published June 9, 2024 at 4:05pm

Update June 9, 2024 at 4:09pm

    ಕಲಬುರಗಿ, ಕೊಪ್ಪಳ, ವಿಜಯಪುರ ಸೇರಿ ಹಲವು ಕಡೆ ಮಳೆ

    ಬೈಕ್​ ಮೇಲೆ ಮೂವರು ಹೋಗುತ್ತಿದ್ದ ವೇಳೆ ನಡೆದ ಘಟನೆ

    ಧಾರಾಕಾರ ಸುರಿದ ಭಾರೀ ಮಳೆಗೆ ಓರ್ವ ಯುವಕ ಸಾವು

ಬೆಳಗಾವಿ: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಆದರೆ ಇದರ ಮಧ್ಯೆ ಇಂದು ಸುರಿದ ಭಾರೀ ಮಳೆಗೆ ಓರ್ವ ಯುವಕ ಸಾವನ್ನಪ್ಪಿರೋ ಘಟನೆ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ನಡೆದಿದೆ. ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್ (21) ಮೃತ ದುರ್ದೈವಿ.

ಇದನ್ನೂ ಓದಿ: ಬಿಯರ್​ ಖರೀದಿಸುವಾಗ ಬಾರ್​ನಲ್ಲೇ ತಗ್ಲಾಕೊಂಡ ಮಗ.. ಬೆಪ್ಪಾದ ಅಪ್ಪ ಮಾಡಿದ್ದೇನು ಗೊತ್ತಾ?

ಒಂದೇ ಬೈಕ್​ ಮೇಲೆ ಮೂವರು ಬೆಳಗಾವಿಗೆ ಹೋಗುತ್ತಿದ್ದರು. ಇದೇ ವೇಳೆ ಧಾರಾಕಾರ ಮಳೆಗೆ ಏಕಾಏಕಿ ಬೃಹತ್ ಮರವೊಂದು ಧರೆಗುರುಳಿದೆ. ಪರಿಣಾಮ ಮೂವರಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೂಡಲೇ ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಇಬ್ಬರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ರಸ್ತೆಯಲ್ಲಿದ್ದ ಮರವನ್ನು ತೆರವು ಮಾಡಿದ್ದಾರೆ. ಈ ಘಟನೆ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಬೆಳಗಾವಿ, ಕೊಪ್ಪಳ, ವಿಜಯಪುರ, ಕಲಬುರಗಿ, ಗದಗ, ಚಿಕ್ಕೋಡಿ, ಧಾರಾವಾಡ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆ; ರಸ್ತೆ ಮಧ್ಯೆ ಯುವಕ ದಾರುಣ ಸಾವು; ಮತ್ತಿಬ್ಬರ ಸ್ಥಿತಿ ಗಂಭೀರ

https://newsfirstlive.com/wp-content/uploads/2024/06/death2.jpg

Load More