ವಿದ್ಯಾರ್ಥಿಗಳು ಹಾಗೂ ಪೋಷಕರು ಓದಲೇಬೇಕಾದ ಸ್ಟೋರಿ ಇದು
ಲೋನ್ ಆ್ಯಪ್ಗಳ ವಿಪರೀತ ಟಾರ್ಚರ್ಗೆ ಸಾವಿನ ಕದ ತಟ್ಟಿದ ವಿದ್ಯಾರ್ಥಿ
ಮೆಕಾನಿಕಲ್ ಎಂಜಿನಿಯರಿಂಗ್ನಲ್ಲಿ ಓದುತ್ತಾ ಕಾಲೇಜಿಗೆ ಟಾಪರ್ ಆಗಿದ್ದ
ಬೆಂಗಳೂರು: ಲೋನ್ ಕಂಪನಿಗಳ ಟಾರ್ಚರ್ ತಾಳಲಾಗದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ತೇಜಸ್ (22 ) ಮೃತ ಯುವಕ.
ಮೃತ ತೇಜಸ್ ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜಿನಲ್ಲಿ ಆರನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ಮೆಕಾನಿಕಲ್ ಎಂಜಿನಿಯರಿಂಗ್ನಲ್ಲಿ ಕಾಲೇಜಿಗೆ ಟಾಪರ್ ಆಗಿದ್ದನು. ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಆ್ಯಪ್ ಮೂಲಕ ಲೋನ್ ಪಡೆದುಕೊಂಡಿದ್ದನಂತೆ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕಂಪನಿಗಳು ವಿಪರೀತ ಟಾರ್ಚರ್ ನೀಡುತ್ತಿದ್ದವಂತೆ. ಹೀಗಾಗಿ ಮನನೊಂದು ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಡೆತ್ ನೋಟ್ನಲ್ಲಿ ಏನಿದೆ..?
ಅಮ್ಮ ಅಪ್ಪ ನನ್ನನ್ನು ಕ್ಷಮಿಸಿ. ನಾನು ಮಾಡಿದ ತಪ್ಪಿಗೆ ಬೇರೆ ದಾರಿಯಿಲ್ಲ. ಮಾಡಿರುವ ಸಾಲ ತೀರಿಸಲು ಆಗೋದಿಲ್ಲ. ಅದಕ್ಕಾಗಿ ಇದು ನನ್ನ ಕೊನೆಯ ತೀರ್ಮಾನ. ಥ್ಯಾಂಕ್ಸು ಗುಡ್ ಬಾಯ್.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ