ಮಳೆಯಿಂದ ಬಿಜೆರ್‌ನಲ್ಲಿ ಕತ್ವಾಲಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆ
25ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನೀರಿನಲ್ಲಿ ಮುಳುಗಡೆ
ಚಾಲಕನ ಈ ರೀತಿಯ ದುಸ್ಸಾಹಸಕ್ಕೆ ಕೈ ಹಾಕಿದ್ದೇ ಘಟನೆಗೆ ಮುಖ್ಯ ಕಾರಣ!
ಲಕ್ನೋ: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಭೀಕರ ಮಳೆಯಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮನೆಯಿಂದ ಹೊರ ಬರಲು ಆಗದೇ ಭಯ ಪಡುವಂತಹ ಸ್ಥಿತಿ ಎದುರಾಗಿದೆ. ಇನ್ನು ಭೀಕರ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿವೆ. ಹೀಗಾಗಿ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಸ್ಥಳೀಯ ನಿವಾಸಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ರಣ ಭೀಕರ ಮಳೆಯಿಂದ ಬಿಜೆರ್‌ನಲ್ಲಿ ಕೋಟವಾಲಿ ನದಿಯ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ಹೀಗಾಗಿ ಹರಿದ್ವಾರ ನಜೀಬಾಬಾದ್ ರಸ್ತೆಯಲ್ಲಿ ನೀರು ರಭಸವಾಗಿ ಹರಿಯುತ್ತಿದೆ. ಹೀಗಿದ್ದರೂ ಕೂಡ ಬಸ್ ಚಾಲಕನೋರ್ವ ದುಸಾಹಸಕ್ಕೆ ಮುಂದಾಗಿದ್ದು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾನೆ. ಭೀಕರ ಪ್ರವಾಹದಿಂದ ತುಂಬಿ ಹರಿಯುತ್ತಿದ್ದ ನೀರಿನಲ್ಲಿ ಬಸ್ನ್ನು ಚಲಿಸಿಕೊಂಡು ಹೋಗಿ ಎಲ್ಲಾ ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿದ್ದಾನೆ. 25ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಡು ನೀರಿನಲ್ಲಿ ಸಿಲುಕಿಕೊಂಡಿರೋ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ಕೂಡಲೇ ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಅಲ್ಲಿನ ಸ್ಥಳೀಯರು ಜೆಸಿಬಿ ಹಾಗೂ ಕ್ರೇನ್ ಮೂಲಕ ರಕ್ಷಣೆ ಮಾಡಲು ಹರಸಾಹಸ ಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಏಕಾಏಕಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ಇಬ್ಬರು ಯುವಕರು ಬಸ್ ಟಾಪ್ ಮೇಲೆ ಹತ್ತಿ ನಿಂತು ಜೀವ ಉಳಿಸಿಕೊಳ್ಳಲು ಮುಂದಾಗಿದ್ದರು. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸ್ ತಂಡ ದೌಡಾಯಿಸಿ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ನೀರಿನ ಮಟ್ಟವನ್ನು ಗಮನಿಸದೇ ಚಾಲಕ ಈ ರೀತಿಯ ದುಸ್ಸಾಹಸಕ್ಕೆ ಕೈ ಹಾಕಿದ್ದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕುತ್ತಿದ್ದಾರೆ.
rescue operation continues.. https://t.co/ifEFJQllMe pic.twitter.com/rf5vXEMJyT
— Priyathosh Agnihamsa (@priyathosh6447) July 22, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ