newsfirstkannada.com

ಅತಿ ವೇಗವಾಗಿ ಬಂದು ರಸ್ತೆ ಬದಿ ಉರುಳಿ ಬಿದ್ದ ಕಾರು; ಸ್ಥಳದಲ್ಲೇ ಓರ್ವ ಯುವಕ ಸಾವು

Share :

Published January 15, 2024 at 6:37pm

  ಕಾರಿನಲ್ಲಿದ್ದ ಶ್ರೀನಿವಾಸಪುರ ಮೂಲದ ಚಿರಾಗ್ (26) ಸಾವು

  ಕಾರು ಚಲಿಸುತ್ತಿದ್ದ ಪ್ರವೀಣ್ ಎಂಬಾತನಿಗೆ ಗಂಭೀರ ಗಾಯ

  ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಚಿಕ್ಕಬಳ್ಳಾಫುರ: ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು ರಸ್ತೆ ಬದಿ ಉರುಳಿ ಬಿದ್ದಿರೋ ಘಟನೆ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್ ಬಳಿ ನಡೆದಿದೆ. ಕಾರು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಓರ್ವ ಯುವಕ ಮೃತಪಟ್ಟಿದ್ದಾನೆ. ಮೃತನನ್ನು ಚಿರಾಗ್ (26) ಎಂದು ಗುರುತಿಸಲಾಗಿದೆ.

ಮೃತ ಯುವಕ ಶ್ರೀನಿವಾಸಪುರ ಮೂಲದ ನಿವಾಸಿ. ಕಾರಿನಲ್ಲಿದ್ದ ಮತ್ತೊಬ್ಬ ಯುವಕ ಪ್ರವೀಣ್​ಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಗೊಂಡ ಯುವಕನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅತಿ ವೇಗವಾಗಿ ಬಂದು ರಸ್ತೆ ಬದಿ ಉರುಳಿ ಬಿದ್ದ ಕಾರು; ಸ್ಥಳದಲ್ಲೇ ಓರ್ವ ಯುವಕ ಸಾವು

https://newsfirstlive.com/wp-content/uploads/2024/01/accideant-boy-death.jpg

Load More