/newsfirstlive-kannada/media/post_attachments/wp-content/uploads/2024/10/BGM-MONEY.jpg)
ಬೆಳಗಾವಿ: ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ 2.73 ಕೋಟಿ ರೂಪಾಯಿ ಹಣವನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಮಹಾರಾಷ್ಟ್ರದ ಸಾಂಗಲಿಯಿಂದ ಹುಬ್ಬಳ್ಳಿ ಕಡೆಗೆ ವಾಹನ ಬರುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ವಾಹನ ಚಾಲಕನನ್ನು ಬಂಧಿಸಿ, ಹಣವನ್ನು ಜಪ್ತಿ ಮಾಡಿದ್ದಾರೆ. ಮಹಾರಾಷ್ಟ್ರದ ಸಾಂಗಲಿ ಪಟ್ಟಣದ ಸಚಿನ್ ಮೇನಕುದುಳೆ, ಮಾರುತಿ ಮಾರಗುಡೆ ಬಂಧನಕ್ಕೆ ಒಳಗಾಗಿದ್ದಾರೆ.
ಜಪ್ತಿಯಾದ ಹಣ ಮೂಲದ ಬಗ್ಗೆ ತನಿಖೆ ನಡೆಸುತ್ತಿರೋದಾಗಿ ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆ ಆಗಿದೆ. ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣಾಧಿಕಾರಿಗಳು ಹದ್ದಿನ ಕಣ್ಣುಗಳನ್ನು ಇಟ್ಟಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಬೆಳಗಾವಿಯಲ್ಲಿ 2.73 ಕೋಟಿ ಸೀಜ್ ಆಗಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನೂ ಓದಿ:ದರ್ಶನ್ ಅಭಿನಯದ ಮತ್ತೊಂದು ಸಿನಿಮಾ ಬಿಡುಗಡೆ.. ಕರಿಯ ಬಳಿಕ ಪೊರ್ಕಿ ರೀ- ರಿಲೀಸ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us