newsfirstkannada.com

ಐಸಿಯುನಿಂದ ಶಿಫ್ಟ್ ಆದ ಹೆಚ್‌.ಡಿ ಕುಮಾರಸ್ವಾಮಿ; ಅಪೋಲೋ ಆಸ್ಪತ್ರೆಯಿಂದ 2ನೇ ಹೆಲ್ತ್ ಬುಲೆಟಿನ್ ಬಿಡುಗಡೆ

Share :

31-08-2023

    ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆರೋಗ್ಯ ಈಗ ಹೇಗಿದೆ?

    ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಶ್ರೀ ನಿರ್ಮಲಾನಂದ ಸ್ವಾಮೀಜಿ

    ವಿದೇಶಕ್ಕೆ ತೆರಳಿದ್ದ ನಿಖಿಲ್ ಕುಮಾರಸ್ವಾಮಿ ಆಸ್ಪತ್ರೆಗೆ ಆಗಮನ

ಬೆಂಗಳೂರು: ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ಅಪೋಲೋ ಆಸ್ಪತ್ರೆ ಮತ್ತೊಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಹೆಲ್ತ್ ಬುಲೆಟಿನ್‌ನಲ್ಲಿ ಕುಮಾರಸ್ವಾಮಿ ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಹೆಚ್‌ಡಿಕೆ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ.

ಹೆಚ್.ಡಿ ಕುಮಾರಸ್ವಾಮಿ ಅವರ ಅನಾರೋಗ್ಯ ಹಿನ್ನೆಲೆ ಇಂದು ಆಸ್ಪತ್ರೆಗೆ ವಿವಿಧ ಗಣ್ಯರು ಭೇಟಿ ನೀಡಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಆಸ್ಪತ್ರೆಗೆ ಆಗಮಿಸಿ ಹೆಚ್‌ಡಿಕೆ ಅವರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ನಿರ್ಮಲಾನಂದ ಶ್ರೀಗಳು ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಯಾವಾಗ ಡಿಸ್ಚಾರ್ಜ್ ಮಾಡಬೇಕೆಂಬುದನ್ನು ವೈದ್ಯರು ನಿರ್ಧರಿಸುತ್ತಾರೆ. ಕುಮಾರಸ್ವಾಮಿಯವರು ನಮ್ಮ ಜೊತೆ ಚೆನ್ನಾಗಿ ಮಾತನಾಡಿದ್ರು. ಅವರು ಬೇಗ ಗುಣಮುಖರಾಗಿ ಬರ್ತಾರೆ ಎಂದು ತಿಳಿಸಿದ್ದಾರೆ.

ಇನ್ನು, ವಿದೇಶಕ್ಕೆ ತೆರಳಿದ್ದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಆಸ್ಪತ್ರೆಗೆ ಭೇಟಿ ನೀಡಿದ್ರು. ನಿಖಿಲ್ ಪತ್ನಿ ರೇವತಿ ಅವರು ಕೂಡ ಆಸ್ಪತ್ರೆಗೆ ಆಗಮಿಸಿ ಮಾವನ ಆರೋಗ್ಯ ವಿಚಾರಿಸಿದ್ದಾರೆ. ಹೆಚ್‌ಡಿಕೆ ಅವರ ಆರೋಗ್ಯ ವಿಚಾರಿಸಲು ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್, ಶ್ರೀರಂಗಪಟ್ಟಣದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯನವರು ಜಯನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ಆಗಮಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಐಸಿಯುನಿಂದ ಶಿಫ್ಟ್ ಆದ ಹೆಚ್‌.ಡಿ ಕುಮಾರಸ್ವಾಮಿ; ಅಪೋಲೋ ಆಸ್ಪತ್ರೆಯಿಂದ 2ನೇ ಹೆಲ್ತ್ ಬುಲೆಟಿನ್ ಬಿಡುಗಡೆ

https://newsfirstlive.com/wp-content/uploads/2023/08/HD-Kumaraswamy-2.jpg

Load More