/newsfirstlive-kannada/media/post_attachments/wp-content/uploads/2024/06/darshan22.jpg)
ತುಮಕೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್​​ ಗ್ಯಾಂಗ್​ನ ಮೂವರು ಆರೋಪಿಗಳಿಗೆ ಈಗಾಗಲೇ ಕೋರ್ಟ್​ ಜಾಮೀನು ನೀಡಿದೆ. ಎ15 ಆರೋಪಿ ಕಾರ್ತಿಕ್, ಎ16 ಕೇಶವಮೂರ್ತಿ ಹಾಗೂ ಎ17 ನಿಖಿಲ್ ನಾಳೆ ತುಮಕೂರು ಕಾರಾಗೃಹದಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಕೇಸ್​ನಲ್ಲಿ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್ ಈ ಮೂವರಿಗೂ ಹೈಕೋರ್ಟ್​ ಜಾಮೀನು ನೀಡಿತ್ತು. ಆರೋಪಿಗಳಿಗೆ ಸೆಪ್ಟೆಂಬರ್ 23 ರಂದು ಜಾಮೀನು ಸಿಕ್ಕರೂ ಜೈಲಿನಿಂದ ಇನ್ನು ಬಿಡುಗಡೆ ಆಗಿರಲಿಲ್ಲ. ಇದಕ್ಕೆ ಮೂಲ ಕಾರಣ ನ್ಯಾಯಾಲಯದ ಆದೇಶ ಪ್ರತಿಯು ತುಮಕೂರು ಕಾರಾಗೃಹದ ಜೈಲು ಅಧಿಕಾರಿಗಳನ್ನ ತಲುಪಿಲ್ಲ. ಹೀಗಾಗಿ ಮೂವರು ಇನ್ನು ಜೈಲಿನಲ್ಲೇ ಇದ್ದಾರೆ.
ಇದನ್ನೂ ಓದಿ:DCM ಡಿ.ಕೆ ಶಿವಕುಮಾರ್ ರಾತ್ರಿ 2 ಗಂಟೆವರೆಗೆ ಸಿಲಿಕಾನ್ ಸಿಟಿ ರೌಂಡ್ಸ್​.. ಕಾರಣವೇನು?
ಮೂವರು ಆರೋಪಿಗಳು ಇಂದು ಜೈಲಿನಿಂದ ಬಿಡುಗಡೆ ಆಗುವುದು ಬಹುತೇಕ ಅನುಮಾನವಾಗಿದೆ. ಹೀಗಾಗಿ ಎಲ್ಲ ಪ್ರಕ್ರಿಯೆ ಮುಗಿಸಿ ಬಿಡುಗಡೆ ಆಗಬೇಕಿದೆ. ಸದ್ಯ ನಾಲ್ವರು ಆರೋಪಿಗಳ ಪೈಕಿ ಮೂವರಿಗೆ ಮಾತ್ರ ಜಾಮೀನು ನೀಡಲಾಗಿದೆ. ಎ16 ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್​​ನಿಂದ ಬೇಲ್ ಸಿಕ್ಕರೇ, ಎ15 ಆರೋಪಿ ಕಾರ್ತಿಕ್ ಹಾಗೂ ಎ17 ಆರೋಪಿ ನಿಖಿಲ್​ಗೆ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇನ್ನು ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಉಳಿದ ಎಲ್ಲ ಆರೋಪಿಗಳು ರಾಜ್ಯದ ಬೇರೆ ಬೇರೆ ಜೈಲಿನಲ್ಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ