ಹೃದಯ ವಿದ್ರಾವಕ ಘಟನೆ.. ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ದಾರುಣ ಬಲಿ

author-image
Veena Gangani
Updated On
ಹೃದಯ ವಿದ್ರಾವಕ ಘಟನೆ.. ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ದಾರುಣ ಬಲಿ
Advertisment
  • ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೊರವನಹಳ್ಳಿಯ ಹೃತೀಕ್ಷ
  • ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಮಗು ಶವವಿಟ್ಟು ಗೋಳಾಟ
  • ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಂಡ್ಯದಲ್ಲಿ ಹೃತೀಕ್ಷ ನಿಧನ

ಮಂಡ್ಯ: ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ಬಲಿಯಾಗಿರೋ ಮನಕಲಕುವ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಳಿ ನಡೆದಿದೆ. ಮೂರೂವರೆ ವರ್ಷದ ಹೃತೀಕ್ಷ ಮೃತ ಮಗು.

ಇದನ್ನೂ ಓದಿ: ರಾಜ್ಯದಲ್ಲಿ 47 ಕೊರೊನಾ ಕೇಸ್.. ಪಾಸಿಟಿವಿಟಿ ರೇಟ್‌ ಹೆಚ್ಚಾದ್ರೆ ಎಲ್ಲರಿಗೂ ಟೆನ್ಷನ್; ಯಾಕೆ ಗೊತ್ತಾ?

publive-image

ವಾಣಿ-ಅಶೋಕ್ ಎಂಬುವವರ ಮಗು ಮೃತಪಟ್ಟಿದೆ. ಮಗಳನ್ನು ಕಳೆದುಕೊಂಡ ದಂಪತಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೊರವನಹಳ್ಳಿಯ ನಿವಾಸಿ. ಹೃತೀಕ್ಷಾಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು.

publive-image

ಆದ್ರೆ ಇದೇ ವೇಳೆ ಹೆಲ್ಮೆಟ್ ತಪಾಸಣೆಗೆಂದು ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಇದೇ ವೇಳೆ ಬೈಕ್​ನಲ್ಲಿದ್ದ ತಂದೆ, ತಾಯಿ ಹಾಗೂ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಪರಿಣಾಮ ಮಗಳ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಪರಿಣಾಮ ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಜೀವಬಿಟ್ಟಿದೆ. ಇನ್ನೂ, ಮುದ್ದಾದ ಮಗುವನ್ನು ಕಳೆದುಕೊಂಡು ಪೋಷಕರು ಮಿಮ್ಸ್ ಆಸ್ಪತ್ರೆ ಎದುರು ರಸ್ತೆಯಲ್ಲೇ ಶವವಿಟ್ಟು ಅಳುತ್ತಿದ್ದಾರೆ. ಪೊಲೀಸರ ನಡೆಗೆ ಸಾರ್ವಜನಿಕರ ಆಕ್ರೋಶ ಹೊರ ಹಾಕುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment