ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಗುಡುಗು ಮಿಂಚು ಸಹಿತ ಜೋರು ಮಳೆಯಾಗುವ ಸಾಧ್ಯತೆ
ಸಿಲಿಕಾನ್ ಸಿಟಿಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಅಂತ ಭಾರತಿಯ ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ.
ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾಸನ, ಮಂಡ್ಯ ಮತ್ತು ಮೈಸೂರು ಹಾಗೂ ಎಲ್ಲಾ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯೆತಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನವೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಅಥವಾ ವಾಡಿಕೆ ಮಳೆಯಾಗುವ ಸಾಧ್ಯತೆ ಇದೆಯಂತೆ. ಮಿಂಚು ಮತ್ತು ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ