3 ಡಿಸಿಎಂ ಹುದ್ದೆ ಸೃಷ್ಟಿಸೋ ಬೇಡಿಕೆಗೆ ಡಿ.ಕೆ ಶಿವಕುಮಾರ್ ಬೇಸರ
ಕೆ.ಎನ್ ರಾಜಣ್ಣ ಅವರ ಒತ್ತಾಯಕ್ಕೆ ಸಿಎಂ ಸಿದ್ದರಾಮಯ್ಯ ಸಹಮತ?
ಇಂದು ಸಂಜೆ ಅಥವಾ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ
ಬೆಂಗಳೂರು: 3 ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಸಚಿವ ಕೆ.ಎನ್ ರಾಜಣ್ಣ 3 ಡಿಸಿಎಂ ಹುದ್ದೆಯ ಬಗ್ಗೆ ಹೇಳಿಕೆ ನೀಡಿದ್ದು ಭಿನ್ನಾಭಿಪ್ರಾಯಕ್ಕೆ ನಾಂದಿ ಹಾಡಿದೆ. ಸ್ವತಃ ಸಿಎಂ ಸಿದ್ದರಾಮಯ್ಯನವರೇ ಕೆ.ಎನ್ ರಾಜಣ್ಣ ಅವರ ಒತ್ತಾಯಕ್ಕೆ ಸಹಮತ ಸೂಚಿಸಿದ್ದು, ಹೈಕಮಾಂಡ್ ಹೇಳಿದ್ದನ್ನು ಮಾಡುವೆ ಎಂದು ಹೇಳಿದ್ದಾರೆ. ಪರೋಕ್ಷವಾಗಿ ಸಚಿವ ಕೆ.ಎನ್ ರಾಜಣ್ಣ ಅವರ ಮಾತಿಗೆ ಸಹಮತ ಸೂಚಿಸಿದ್ದು ಸಂಚಲನ ಸೃಷ್ಟಿಸಿದೆ. ಈ ಬೆಳವಣಿಗೆಯ ಹಿನ್ನೆಲೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನೇ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಪರೋಕ್ಷವಾಗಿ ಸಮ್ಮತಿ ಕೊಟ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ..!
ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಭೇಟಿ ನೀಡಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿಸುವ ಚರ್ಚೆ ನಡುವೆಯೇ ಈ ಭೇಟಿಯಾಗಿದ್ದು ಕುತೂಹಲ ಮೂಡಿಸಿತ್ತು. ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ವಿಚಾರವಾಗಿಯೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸುಮಾರು ಅರ್ಧ ಗಂಟೆಗಳ ಕಾಲ ಸಿಎಂ ಜೊತೆ ಚರ್ಚಿಸಿ ತೆರಳಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಇಲ್ಲವೇ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕಾವೇರಿ ಜಲ ವಿವಾದ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ.
3 ಡಿಸಿಎಂ ಹುದ್ದೆ ಸೃಷ್ಟಿಯಾಗುವ ಚರ್ಚೆಯಾಗುತ್ತಿದ್ದಂತೆ ಡಿ.ಕೆ ಶಿವಕುಮಾರ್ ಬೆಂಬಲಿಗ ಶಾಸಕರು ಧ್ವನಿ ಎತ್ತಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಅವರು ಜಾತಿ ಆಧಾರದ ಮೇಲೆ ಡಿಸಿಎಂ ಹುದ್ದೆ ಸೃಷ್ಟಿಸುವುದಾದ್ರೆ ನಾವು ಸಿಎಂ ಸ್ಥಾನ ಕೇಳೊದ್ರಲ್ಲಿ ತಪ್ಪೇನಿಲ್ಲ. ಡಿಕೆ ಶಿವಕುಮಾರ್ ಅವರಿಗೆ ಜಾತಿ ಆಧಾರದ ಮೇಲೆ ಡಿಸಿಎಂ ಮಾಡಿಲ್ಲ. ಸಾಮರ್ಥ್ಯ ನೋಡಿ ಡಿಶಿಕೆಗೆ ಡಿಸಿಎಂ ಸ್ಥಾನ ಕೊಟ್ಟಿರೋದು. ನನ್ನ ವೈಯುಕ್ತಿಕ ಅಭಿಪ್ರಾಯ ಡಿ.ಕೆ.ಶಿವಕುಮಾರ್ ಸಿಎಂ ಅಭ್ಯರ್ಥಿಯಾಗಿದ್ದಾರೆ. ಒಬ್ಬರೇ ಡಿಸಿಎಂ ಆಗಿದ್ರೆ ಪಕ್ಷದ ಸಂಘಟನೆಗೆ ಅನುಕೂಲವಾಗುತ್ತೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಅನ್ನೋ ಚರ್ಚೆ ಜೋರಾಗಿದ್ದು ಸ್ವಲ್ಪ ತಣ್ಣಗಾಗಿತ್ತು. ಇದೀಗ 3 ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಮುನ್ನೆಲೆಗೆ ಬಂದಿದೆ. ಡಿಸಿಎಂ ಹುದ್ದೆ ಸೃಷ್ಟಿಸುವ ಹೇಳಿಕೆ ಬಿರುಗಾಳಿಯಾಗುವ ಸೂಚನೆಗಳಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಖುದ್ದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನಾಳೆ ದೆಹಲಿಗೂ ತೆರಳುತ್ತಿರುವ ಡಿ.ಕೆ ಶಿವಕುಮಾರ್ ಅವರ ನಡೆ ಸದ್ಯ ಕುತೂಹಲ ಕೆರಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ