/newsfirstlive-kannada/media/post_attachments/wp-content/uploads/2025/05/mys-death.jpg)
ಮೈಸೂರು: ಮಗಳು ಮನೆ ಬಿಟ್ಟು ಓಡಿ ಹೋಗಿದ್ದಕ್ಕೆ ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿರೋ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಮೃತ ದುರ್ದೈವಿಗಳು.
ಇದನ್ನೂ ಓದಿ: ಪ್ಲೇ-ಆಫ್ಗೆ ಬಂತು ಆನೆಬಲ.. ಬಲಿಷ್ಠ ಸ್ಟಾರ್ ವೇಗಿಗೆ ಮತ್ತೆ ವೆಲ್ಕಮ್ ಹೇಳಿದ ಆರ್ಸಿಬಿ..!
ಹೌದು, ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವನಕೊಂದಿಗೆ ಪ್ರೀತಿಯಲ್ಲಿ ಬಿದ್ದು ಮನೆಬಿಟ್ಟು ಹೋಗಿದ್ದಳು. ಹೀಗಾಗಿ ಮಾನಕ್ಕೆ ಅಂಜಿ ಮೂವರು ಜೀವ ಕಳೆದುಕೊಂಡಿದ್ದಾರೆ. ಹೆಚ್.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಮಳೆಯ ನಡುವೆಯೇ ಮೂವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮೃತರನ್ನು ನೆನೆದು ಇಡೀ ಗ್ರಾಮಸ್ಥರು ಕಣ್ಣೀರಿಡುತ್ತಿದ್ದಾರೆ. ಅತ್ತ, ಮನೆ ಬಿಟ್ಟು ಹೋಗಿದ್ದ ಮಗಳು ಅಂತ್ಯಕ್ರಿಯೆಗೂ ಬಂದಿಲ್ಲ ಹೀಗಾಗಿ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.
ನಮ್ಮನ್ನ ಹುಳಬೇಡಿ, ಅಗ್ನಿ ಸ್ಪರ್ಶ ಮಾಡಿ. ನಮ್ಮ ಸಾವಿಗೆ ನಾವೇ ಕಾರಣ. ಬೆಳಗಿನ ಜಾವ 4 ಗಂಟೆಗೆ ನಿದ್ದೆ ಬರಲಾರದೆ ಒದ್ದಾಡಿ ಬರೆದಿದ್ದೇವೆ. ಮಾನಕ್ಕೆ ಅಂಜಿ ಹೀಗೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ಮಗಳು ನಮಗೆಲ್ಲ ಮೋಸ ಮಾಡಿದಳು. ನಮ್ಮ ಪರಿಸ್ಥಿತಿ ಜಗತ್ತಿನಲ್ಲಿ ಯಾರಿಗೂ ಬರಬಾರದು. ನಮ್ಮ ಆಸ್ತಿ ಒಂದು ರೂಪಾಯಿಯೂ ಅವಳಿಗೆ ಸಿಗಬಾರದು. ಎಲ್ಲಾ ಆಸ್ತಿಯನ್ನ ಚಿಕ್ಕಪ್ಪನಿಗೆ ನೀಡಿ. ಮನೆ, ಸೈಟ್, ಮನೆಯಲ್ಲಿರುವ ಎರಡುವರೆ ಲಕ್ಷ ಹಣ ಯಾವುದು ಅವಳಿಗೆ ಸಿಗಬಾರದು. ಚಿಕ್ಕಪ್ಪನ ಹೆಂಡತಿ ಸೌಮ್ಯಗೂ ಸಿಗಬಾರದು ಅಂತ ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟು ಮೃತಪಟ್ಟಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ