newsfirstkannada.com

3 ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು ಸಾಯಿಸಿದ ಪಾಪಿ; ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ

Share :

Published April 27, 2024 at 6:35pm

Update April 27, 2024 at 6:37pm

    ಜೋತಿಭಾ ತುಕಾರಾಮ ಬಾಬಾಬರ ಎಂಬಾತನಿಂದ ಕೊಲೆ ಆರೋಪ

    ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದ ಘಟನೆ ಇದು

    ಕುಟುಂಬಸ್ಥರ ಗಲಾಟೆಯಲ್ಲಿ ಏನೂ ಅರಿಯದ ಕಂದಮ್ಮ ಸಾವು

ಬೆಳಗಾವಿ: ಎರಡು ಕುಟುಂಬಗಳ ನಡುವೆ ನಡೆದ ಜಗಳದಲ್ಲಿ ಮಗು ಸಾವನ್ನಪ್ಪಿರೋ ದಾರುಣ ಘಟನೆ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಕೊಲೆಯಾದ ಮಗು.

ಇದನ್ನೂ ಓದಿ: ಬ್ರೇಕ್ ಬದಲಾಗಿ ಎಕ್ಸಲೇಟರ್ ಒತ್ತಿದ ಡ್ರೈವರ್; ಬೆಂಗಳೂರಲ್ಲಿ ಸರಣಿ ಅಪಘಾತ, ಅಸಲಿಗೆ ಆಗಿದ್ದೇನು?

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕಕ್ಕೇರುತ್ತಿದ್ದಂತೆ ಮೂರು ವರ್ಷದ ಮಗುವಿನ ಎದೆ ಮೇಲೆ ಜೋತಿಭಾ ತುಕಾರಾಮ ಬಾಬಾಬರ ಎಂಬಾತ ಕಾಲಿಟ್ಟು ಸಾಯಿಸಿದ್ದಾನೆ ಎನ್ನಲಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಐಗಳಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಏನೂ ಅರಿಯದ ಕಂದಮ್ಮನ ಜೀವ ಬಲಿಯಾಗಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಹೃದಯ ವಿದ್ರಾವಕ ಘಟನೆಯಿಂದ ಇಡೀ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನೀರವ ಮೌನ ಆವರಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

3 ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು ಸಾಯಿಸಿದ ಪಾಪಿ; ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ

https://newsfirstlive.com/wp-content/uploads/2024/04/Chikkodi-Baby-death.jpg

Load More