newsfirstkannada.com

ಬಿಸಿಯೂಟ ಸೇವನೆ.. ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ!

Share :

Published February 8, 2024 at 7:54pm

    12 ಮಕ್ಕಳಿಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು

    ಮಧ್ಯಾಹ್ನ ಶಾಲೆಯಲ್ಲಿ ಮೊಸರನ್ನ ಸೇರಿಸಿದ್ದ ವಿದ್ಯಾರ್ಥಿಗಳು

    ರಾತ್ರೋರಾತ್ರಿ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿದ ಪೋಷಕರು

ತುಮಕೂರು: ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರೋ ಘಟನೆ ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿನಲ್ಲಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ವಿದ್ಯಾರ್ಥಿಗಳು ಮೊಸರನ್ನ ಸೇವಿಸಿದ್ದರು. ಶಾಲೆಯಿಂದ ಮನೆಗೆ ಹೋದ ಮೇಲೆ ತಡರಾತ್ರಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಗಿದೆ. ಕೂಡಲೇ ರಾತ್ರೋರಾತ್ರಿ ಪೋಷಕರು ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 12 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕುಣಿಗಲ್ ಟಿಹೆಚ್​​ಓ ಹಾಗೂ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ತೀವ್ರವಾಗಿ ಅಸ್ವಸ್ಥಗೊಂಡ 10 ವಿದ್ಯಾರ್ಥಿಗಳಿಗೆ ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಸಿಯೂಟ ಸೇವನೆ.. ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ!

https://newsfirstlive.com/wp-content/uploads/2024/02/students.jpg

Load More