ಮುಂಬೈ ನಗರದ ಪೊಲೀಸರ ಸೋಗಿನಲ್ಲಿ ಶಿಕ್ಷಕಿಯ ಖಾತೆಗೆ ಕನ್ನ
50 ವರ್ಷ ವಯಸ್ಸಿನ ಚತುರಾ ರಾವ್ ಎಂಬ ಶಿಕ್ಷಕಿಗೆ ವಂಚನೆ!
ಎರಡು ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ವರ್ಗಾವಣೆ
ಬೆಂಗಳೂರು: ಮುಂಬೈ ಕ್ರೈಂ ಬ್ರಾಂಚ್ ಪೊಲೀಸರ ಸೋಗಿನಲ್ಲಿ ಸೈಬರ್ ವಂಚಕರು ಶಿಕ್ಷಕನ ಖಾತೆಗೆ ಕನ್ನ ಹಾಕಿರೋ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ದೇವನಹಳ್ಳಿ ನಿವಾಸಿ ಚತುರಾ ರಾವ್ (50) ಸುಮಾರು 32.25 ಲಕ್ಷ ರೂಪಾಯಿ ಕಳೆದುಕೊಂಡ ಶಿಕ್ಷಕಿ. ಸದ್ಯ ದೂರಿನ ಮೇರೆಗೆ ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಚತುರಾ ರಾವ್ ಅವರು ವೃತ್ತಿಯಲ್ಲಿ ಶಿಕ್ಷಕರಾಗಿದ್ದಾರೆ. ಇವರಿಗೆ ಆಗಸ್ಟ್ 2ರಂದು ಫೆಡೆಕ್ಸ್ ಕಂಪನಿಯ ಪ್ರತಿನಿಧಿ ಹೆಸರಿನಲ್ಲಿ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ, ನಿಮ್ಮ ಹೆಸರಿನಲ್ಲಿ ಕೊರಿಯರ್ ಪಾರ್ಸೆಲ್ ಬಂದಿದ್ದು, ಅದರಲ್ಲಿ ನಿಮ್ಮ ಮೊಬೈಲ್ ನಂಬರ್, ಆಧಾರ್ ನಂಬರ್, ಐದು ಪಾಸ್‌ಪೋರ್ಟ್, ಐದು ಕ್ರೆಡಿಟ್ ಕಾರ್ಡ್ ಮತ್ತು ಒಂದು ಲ್ಯಾಪ್ ಟಾಪ್ ಪತ್ತೆಯಾಗಿದೆ. ಈ ಪ್ರಕರಣವನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರಿಗೆ ವರ್ಗಾಯಿಸುತ್ತೇವೆ ಎಂದು ಹೇಳಿ, ಕೈಪ್ ಎಂಬ ಆ್ಯಪ್ ಡೌನ್‌ಲೋಡ್ ಮಾಡಿಸಿದ್ದಾನೆ. ಅಲ್ಲದೇ ಮಾದಕ ವಸ್ತು ನಿಗ್ರಹ ಪಡೆ ಅಧಿಕಾರಿ ಜತೆ ಮಾತನಾಡಿಸಿದ್ದಾನೆ. ಬಳಿಕ ಅಪರಿಚಿತ ವ್ಯಕ್ತಿ ವಿಡಿಯೋ ಕರೆ ಮಾಡಿ, ಯಾರೋ ನಿಮ್ಮ ಹೆಸರಿನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತಿಳಿದುಕೊಳ್ಳಬೇಕಾದರೆ ನಿಮ್ಮ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಬೇಕು ಎಂದಿದ್ದಾನೆ.
ಆರೋಪಿಗಳ ಹೇಳಿಕೆಯಿಂದ ಗಾಬರಿಗೊಂಡ ಶಿಕ್ಷಕಿ ಚತುರಾ ರಾವ್, ತಮ್ಮ ಎರಡು ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ 32.25 ಲಕ್ಷ ರೂಪಾಯಿಯನ್ನು ವರ್ಗಾಯಿಸಿದ್ದಾರೆ. ಬಳಿಕ ಮತ್ತೆ ಕರೆ ಮಾಡಿದರೆ ಆರೋಪಿಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಈ ಸಂಬಂಧ ಚತುರಾ ರಾವ್ ದೂರು ನೀಡಿದ್ದಾರೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ