newsfirstkannada.com

ರಾಯಚೂರು ಜಿಪಂ CEO ದಿಟ್ಟ ನಿರ್ಧಾರ.. ಅಕ್ರಮ ಎಸೆಗುತ್ತಿದ್ದ 32 ಪಿಡಿಓ ಅಮಾನತು..!

Share :

Published January 20, 2024 at 11:57am

    ಉದ್ಯೋಗ ಖಾತ್ರಿಯಲ್ಲಿ ಅಕ್ರಮ ಆರೋಪ ಹಿನ್ನೆಲೆ

    2020-21 ಮತ್ತು 2022ನೇ ಸಾಲಿನಲ್ಲಿ ದೂರು ದಾಖಲು

    ತನಿಖೆ ಬಳಿಕ ಅಮಾನತು ಮಾಡಿ ಆದೇಶ

ರಾಯಚೂರು: ಉದ್ಯೋಗ ಖಾತ್ರಿಯಲ್ಲಿ ಅಕ್ರಮ ಮಾಡಿದ್ದ 32 ಪಿಡಿಓಗಳನ್ನು ಸರ್ಕಾರ ಅಮಾನತು ಮಾಡಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯತ್​ಗಳಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು.

2020-21 ಮತ್ತು 2022ನೇ ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹಣದ ಅವ್ಯವಹಾರ ಬೆಳಕಿಗೆ ಬಂದಿತ್ತು. ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ತುಕಾರಾಮ್ ಪಾಂಡ್ವೆ, 27 ಗ್ರಾಮ ಪಂಚಾಯತಿ ಪಿಡಿಓಗಳನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಜೊತೆಗೆ ಬೇರೆ ಜಿಲ್ಲೆಗೆ ವರ್ಗಾವಣೆಗೊಂಡ ಐವರನ್ನು ಸೇವೆಯಿಂದ ವಜಾಗೊಳಿಸುವಂತೆ ಆದೇಶ ಮಾಡಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ದೂರು ದಾಖಲಾಗಿತ್ತು. ಹೀಗಾಗಿ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯತ್​​ಗಳನ್ನು ವಿಶೇಷ ಸಾಮಾಜಿಕ ಪರಿಶೋಧನೆಗೆ ಒಳಪಡಿಸಲಾಗಿತ್ತು. ಮಧ್ಯಂತರ ವರದಿಯಲ್ಲಿ ಕರ್ತವ್ಯಲೋಪ ಮತ್ತು ಹಣ ದುರುಪಯೋಗ ನಡೆದಿರುವುದು ಮೇಲ್ನೋಟಕ್ಕೆ ದೃಢಪಟ್ಟಿತ್ತು. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಕ್ರಮದಲ್ಲಿ ಭಾಗಿಯಾಗಿದ ಅಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನಿರ್ದೇಶಿಸಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಯಚೂರು ಜಿಪಂ CEO ದಿಟ್ಟ ನಿರ್ಧಾರ.. ಅಕ್ರಮ ಎಸೆಗುತ್ತಿದ್ದ 32 ಪಿಡಿಓ ಅಮಾನತು..!

https://newsfirstlive.com/wp-content/uploads/2024/01/RAHUL-3.jpg

Load More