newsfirstkannada.com

BREAKING: ಈಜಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ದಾರುಣ ಸಾವು

Share :

Published May 16, 2024 at 3:03pm

Update May 16, 2024 at 4:13pm

    ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದ ದಾರುಣ ಘಟನೆ

    ಶಾಲೆಗೆ ರಜೆ ಇರುವುದರಿಂದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು

    ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ದಾರುಣವಾಗಿ ಸಾವನ್ನಪ್ಪಿರೋ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು.

ಇದನ್ನೂ ಓದಿ: ರೀ ರಿಲೀಸ್​​ಗೆ ರೆಡಿ ಉಪ್ಪಿಯ ‘‘A’’ ಸಿನಿಮಾ.. ಅಪ್ರತಿಮ ಪ್ರೇಮ ಕಥೆಯ ನೆನಪನ್ನು ಹಂಚಿಕೊಂಡ್ರು ನಟಿ ಚಾಂದಿನಿ

ಮೃತ ನಾಲ್ಕು ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದಾರೆ. ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಕೆರೆಯಲ್ಲಿ ಈಜಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು, ಆಲೂರು ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

BREAKING: ಈಜಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ದಾರುಣ ಸಾವು

https://newsfirstlive.com/wp-content/uploads/2024/05/death47.jpg

Load More