ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗು ಸಾವು
ವೈದ್ಯರ ವಿರುದ್ಧ ಕುಟುಂಬಸ್ಥರ ಆರೋಪ, ಪ್ರತಿಭಟನೆ
ಮಕ್ಕಳ ತಜ್ಞರಿಲ್ಲದೆ ಪ್ರಾಥಮಿಕ ಚಿಕಿತ್ಸೆ ನೀಡಿದ ಸಿಬ್ಬಂದಿ
ತುಮಕೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಕುಣಿಗಲ್ ಪಟ್ಟಣದ ಸಪ್ತಗಿರಿ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಹೀಗಾಗಿ ಸಂಬಂಧಿಕರು ವೈದ್ಯರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ.
ಕೆಂಕೆರೆ ಗ್ರಾಮದ ದಿವಾಕರ್ ಮತ್ತು ಅರುಣಾ ದಂಪತಿಯ ನಾಲ್ಕು ತಿಂಗಳ ಗಂಡು ಮಗು ಆಯಷ್ ಉಸಿರಾಟ ಸಮಸ್ಯೆಯಿಂದ ಬಳಳುತ್ತಿದ್ದು, ಚಿಕಿತ್ಸೆಗಾಗಿ ಸಪ್ತಗಿರಿ ಆಸ್ಪತ್ರೆಯಲ್ಲಿ ಸೇರಿಸಲಾಗಿತ್ತು. ಸ್ಯಾಚುರೇಷನ್ ಕಡಿಮೆ ಇದ್ದದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸಪ್ತಗಿರಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು ಲಭ್ಯ ಇಲ್ಲದೇ ಇದ್ದುದರಿಂದ ಅಲ್ಲಿನ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಬಳಿಕ ಕೂಡಲೇ ಚುಂಚನಗಿರಿ ಆಸ್ಪತ್ರೆಗೆ ಶಿಫ್ಟ್ ಮಾಡುವಂತೆ ಹೇಳಿದ್ದರು. ಆದರೆ ಆಯುಷ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೃತ ಮಗುವಿನ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ವಿರುದ್ಧ ಪ್ರತಿಭಟನೆ ಮಾಡಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಆಯುಷ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ