newsfirstkannada.com

ಮನೆಯಲ್ಲಿ ಮಲಗಿದ್ದ ನಾಲ್ವರ ಹತ್ಯೆ ಕೇಸ್‌ಗೆ ಹೊಸ ಟ್ವಿಸ್ಟ್‌.. ಕಿಟಕಿಯಿಂದ ಬಂದ ಹಂತಕರು; ಆಮೇಲೇನಾಯ್ತು?

Share :

Published April 19, 2024 at 4:53pm

Update April 19, 2024 at 4:54pm

    ಮನೆಯಲ್ಲಿ ಮಲಗಿದ್ದವರನ್ನು ಹತ್ಯೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

    ಮನೆಯ ಹಿಂಬದಿಯ ಚರಂಡಿಯಲ್ಲಿ ಪತ್ತೆಯಾಯ್ತು ಜಂಬೆ, ಚಿನ್ನದ ಬಳೆಗಳು

    ಹಂತಕರಿಗಾಗಿ ಎಸ್​ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ಐದು ತಂಡ ರಚನೆ

ಗದಗ: ಮನೆಯಲ್ಲಿ ಮಲಗಿಕೊಂಡಿದ್ದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಗದಗ ನಗರದ ದಾಸರ ಓಣಿಯಲ್ಲಿ ಈ ಕೊಲೆ ನಡೆದಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷ (16) ಕೊಲೆಯಾದ ದುರ್ದೈವಿಗಳು.

ಇದನ್ನೂ ಓದಿ: 11 ಬಾರಿ ಚಾಕು ಇರಿದು ನೇಹಾ ಹಿರೇಮಠ್ ಕೊಲೆ; ಲವ್ ಜಿಹಾದ್ ಅನುಮಾನ, ತನಿಖೆಗೆ ಆಗ್ರಹ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್​​ನ ಮದುವೆ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಗದಗಕ್ಕೆ ಬಂದಿದ್ದರು. ಮೊದಲನೇ ಮಹಡಿಯ ಕೋಣೆಯಲ್ಲಿ ಪತಿ, ಪತ್ನಿ, ಮಗಳು ಮಲಗಿಕೊಂಡಿದ್ದರು. ಇದೇ ವೇಳೆ ಏಕಾಏಕಿ ಮನೆಯ ಹಿಂದಿರುವ ಕಿಡಕಿಯಿಂದ ಬಂದ ಹಂತಕರು ಕೊಲೆ ಮಾಡಿದ್ದಾರೆ.

ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು‌ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಹಂತಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದಾದ ಬಳಿಕ ಮನೆಯ ಹಿಂಬದಿಯ ಚರಂಡಿಯಲ್ಲಿ ಜಂಬೆಗಳು ಪತ್ತೆಯಾಗಿವೆ. ಇದರ ಜೊತೆಗೆ ಚಿನ್ನದ ಬಳೆಗಳು ಎರಡು ಜತೆ ಶೂಗಳು ಪತ್ತೆಯಾಗಿವೆ. ಹತ್ಯೆಯಾದ ನಾಲ್ವರಲ್ಲಿ ಮೂವರು ಕೊಪ್ಪಳದ ನಿವಾಸಿಗಳು ಎಂದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೇಸ್​ ಸಂಬಂಧ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಸಾಲು, ಸಾಲು ಮರ್ಡರ್‌; ಗೆಳೆಯರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನ ಬರ್ಬರ ಹತ್ಯೆ

ಈ ಬಗ್ಗೆ ಸುದ್ದಿಗಾರರ ಜೊತೆ ಮಾತಾಡಿದ ಬೆಳಗಾವಿ ವಲಯ ಐಜಿಪಿ ವಿಕಾಸ್​ ಕುಮಾರ್​, ಈ ಪ್ರಕರಣ ಬೇರೆ ಬೇರೆ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ನಾವು ಆದಷ್ಟು ಬೇಗ ಆರೋಪಿಗಳನ್ನು ಹಿಡಿಯಬೇಕಾಗಿದೆ. ಎಸ್​ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ಐದು ತಂಡ ರಚನೆ ಮಾಡಿದ್ದೇವೆ. ಈ ಪ್ರಕರಣದ ಬಗ್ಗೆ ಬಹಳಷ್ಟು ಸೂಕ್ಷ್ಮವಾಗಿ ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಹಂತಕರ ಬಂಧನ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮನೆಯಲ್ಲಿ ಮಲಗಿದ್ದ ನಾಲ್ವರ ಹತ್ಯೆ ಕೇಸ್‌ಗೆ ಹೊಸ ಟ್ವಿಸ್ಟ್‌.. ಕಿಟಕಿಯಿಂದ ಬಂದ ಹಂತಕರು; ಆಮೇಲೇನಾಯ್ತು?

https://newsfirstlive.com/wp-content/uploads/2024/04/gadag-death.jpg

Load More