newsfirstkannada.com

BMTC Accident: ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹರಿದ ಬಿಎಂಟಿಸಿ ಬಸ್‌; ತಂದೆ ಪಾರು, ಸ್ಥಳದಲ್ಲೇ ಮಗು ಸಾವು

Share :

16-08-2023

  ತಂದೆ ಶಾಲೆಗೆ ಬಿಡಲು ತೆರಳುತ್ತಿದ್ದಾಗ ನಡೆದ ದುರ್ಘಟನೆ

  ಬಿಎಂಟಿಸಿ ಬಸ್​ ಡಿಕ್ಕಿ ರಭಸಕ್ಕೆ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿ

  ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ವೇಗವಾಗಿ ಬಂದ ಬಸ್ ಡಿಕ್ಕಿ

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಶಾಲೆಗೆ ಹೋಗುತ್ತಿದ್ದ ನಾಲ್ಕೂವರೆ ವರ್ಷದ ಬಾಲಕಿ ಸಾವನ್ನಪ್ಪಿರೋ ದಾರುಣ ಘಟನೆ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.

ನಾಲ್ಕೂವರೆ ವರ್ಷದ ಪೂರ್ವಿ ಎನ್ನುವ ಬಾಲಕಿ ಮೃತ ದುರ್ದೈವಿ. ತಂದೆ ಪ್ರಸನ್ನ ಅವರು ಮಗಳನ್ನ ಶಾಲೆಗೆ ಬಿಡಲು ಬೈಕ್​ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್, ಬೈಕ್​ಗೆ ಡಿಕ್ಕಿ ಹೊಡೆದಿದೆ.

ಬಸ್​ ಡಿಕ್ಕಿ ರಭಸಕ್ಕೆ ಬೈಕ್​ ಚಾಲನೆ ಮಾಡುತ್ತಿದ್ದ ಬಾಲಕಿ ತಂದೆ ಎಡಬದಿ ಬಿದ್ದಿದ್ರೆ, ಬಾಲಕಿ ಬಲ ಬದಿ ಬಿದ್ದಿದ್ದಾಳೆ. ಪರಿಣಾಮ ಬಾಲಕಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BMTC Accident: ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹರಿದ ಬಿಎಂಟಿಸಿ ಬಸ್‌; ತಂದೆ ಪಾರು, ಸ್ಥಳದಲ್ಲೇ ಮಗು ಸಾವು

https://newsfirstlive.com/wp-content/uploads/2023/08/BNG_GIRL_DIE.jpg

Load More