ಕಳೆದ ಒಂದು ತಿಂಗಳಿನಿಂದ ಎಡಬಿಡದೆ ಸುರಿಯುತ್ತಿರುವ ಮಳೆ
ಭಾರೀ ಮಳೆಗೆ ತತ್ತರಿಸಿದ ಇಡೀ ಭಾರತ, ಜನಜೀವನ ಅಸ್ತವ್ಯಸ್ತ
ಪಂಜಾಬ್ನಲ್ಲಿ ಭಾರೀ ಪ್ರವಾಹಕ್ಕೆ 40ಕ್ಕೂ ಹೆಚ್ಚು ಮಂದಿ ಸಾವು
ಚಂಡೀಗಡ: ಕಳೆದ ಒಂದು ತಿಂಗಳಿನಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲ ದೆಹಲಿ, ಹರಿಯಾಣ, ಪಂಜಾಬ್ ಸೇರಿದಂತೆ ಹಿಮಾಚಲ ಪ್ರದೇಶದಲ್ಲಂತೂ ಪ್ರವಾಹ ಉಂಟಾಗಿದೆ. ಅದರಲ್ಲೂ ಪಂಜಾಬ್ನಲ್ಲಿ ಸಂಭವಿಸಿದ ಪ್ರವಾಹದಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ. ಜತೆಗೆ 1,600ಕ್ಕೂ ಹೆಚ್ಚು ಜನರನ್ನು 173 ಪರಿಹಾರ ಶಿಬಿರಗಳಿಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಜಾಬ್ನ ಫಿರೋಜ್‌ಪುರ್, ಫರೀದ್ ಕೋಟ್, ಪಟಿಯಾಲ, ಜಲಂಧರ್ ಸೇರಿ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ. ಸರ್ಕಾರದ ಆದೇಶದ ಮೇರೆಗೆ ವಿಪತ್ತು ನಿರ್ವಹಣಾ ಸಂಸ್ಥೆಗಳು 27 ಸಾವಿರಕ್ಕೂ ಅಧಿಕ ಮಂದಿಯನ್ನು ಪ್ರವಾಹ ಪೀಡಿತ ಪ್ರದೇಶಗಳಿಂದ ಸುರಕ್ಷಿತ ತಾಣಕ್ಕೆ ಸ್ಥಳಾಂತರ ಮಾಡಿದ್ದಾರೆ.
ಸುರಿದ ಭಾರೀ ಮಳೆಗೆ ಪಂಜಾಬ್ ಜರ್ಜರಿತ
ಇತ್ತೀಚೆಗೆ ಸುರಿದ ಭಾರೀ ಮಳೆಗೆ ಪಂಜಾಬ್ ಜರ್ಜರಿತವಾಗಿದೆ. ಇದರ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ಇದುವರೆಗೂ 41 ಮಂದಿ ಪ್ರವಾಹಕ್ಕೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಮರು ಸ್ಥಾಪಿಸಲಾಗಿದೆ. ಭಾರೀ ಮಳೆಯಿಂದ 16 ಕೋಟಿಗೂ ಅಧಿಕ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲು ಹಗಲು ರಾತ್ರಿಯೆನ್ನದೇ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿದು ಬಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ