ಶ್ಯಾಮಲಾ .ಎನ್ ಮತ್ತು ಉಮರ್ ಪಾರೂಕ್ ಎಂಬುವವರಿಂದ ಕೃತ್ಯ
ಸುಮಾರು ಹತ್ತಕ್ಕೂ ಹೆಚ್ಚು ಕಂಪನಿ ತೆರೆದಿದ್ದ ಇಬ್ಬರು ಆರೋಪಿಗಳು!
ಖಾತೆಗಳಲ್ಲಿದ್ದ ಹಣವನ್ನ ಮುಟ್ಟುಗೋಲು ಮಾಡಿದ ED ಅಧಿಕಾರಿಗಳು
ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಡೆಸುತ್ತಿದ್ದ ವಿವಿಧ ಕಂಪನಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ವ್ಯಕ್ತಿಗಳಿಗೆ ಸೇರಿದ ಬ್ಯಾಂಕ್ ಖಾತೆಗಳಲ್ಲಿದ್ದ 5.87 ಕೋಟಿ ರೂಪಾಯಿ ಹಣವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಆನ್‌ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಡಿಜಿಜಿಐ (ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ನಿರ್ದೇಶಕರು) ಕಚೇರಿಗೆ ಬಂದ ದೂರಿನ ಅನ್ವಯ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಕ್ರಮ ಹಣ ವರ್ಗಾವಣೆ ಆರೋಪವಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಯದ ಅಧಿಕಾರಿಗಳು ಪ್ರಕರಣದ ತನಿಖೆ ಶುರು ಮಾಡಿದ್ದರು.
ಆನ್‍ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಕೆಲ ಕಂಪನಿಗಳು ಸಾರ್ವಜನಿಕರಿಗೆ ವಂಚನೆ ಮಾಡಿದ್ದವು. ಶ್ಯಾಮಲಾ ಎನ್ ಹಾಗೂ ಉಮರ್ ಫಾರೂಕ್ ಬೇರೆ ಬೇರೆ ವ್ಯಕ್ತಿಗಳ ದಾಖಲಾತಿಗಳನ್ನು ಬಳಸಿ ವಿವಿಧ ಹೆಸರುಗಳಲ್ಲಿ ಆ ಕಂಪನಿಗಳನ್ನ ತೆರೆಯಲಾಗಿತ್ತು. ಮತ್ತು ಕಂಪನಿಯ ಎಚ್ಆರ್ ಮ್ಯಾನೇಜರ್ ಅನೇಕ ಸಿಮ್ ಕಾರ್ಡ್‌ಗಳನ್ನ ಖರೀದಿಸಿ, ವಿವಿಧ ಬ್ಯಾಂಕ್ ಖಾತೆಗಳಿಗೆ ಅವುಗಳನ್ನ ಲಿಂಕ್ ಮಾಡಿರುವುದು ಇಡಿ ತನಿಖೆಯಲ್ಲಿ ಬಯಲಾಗಿದೆ. ಸದ್ಯ 5.87 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ