/newsfirstlive-kannada/media/post_attachments/wp-content/uploads/2025/05/RAIN-20.jpg)
ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಅಲ್ಲಲ್ಲಿ ಇಂದು ಕೂಡ ಮಳೆ ಅಬ್ಬರಿಸಿದೆ. ಮುಂದಿನ ಮೂರು ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಇದೆ.
ಕಾಫಿನಾಡು ಚಿಕ್ಕಮಗಳೂರು, ಕರವಾಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಮಳೆ ಆರ್ಭಟ ಜೋರಾಗಲಿದೆ. ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರಕ್ಕೆ ಕಡಲು ಪ್ರಕ್ಷುಬ್ಧಗೊಂಡಿದ್ದು, ಮಳೆ ಹೆಚ್ಚಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಪ್ರೀತಿಸಿ ಮದುವೆ, ಎರಡು ಮಕ್ಕಳಾದ್ಮೇಲೆ ಮತ್ತೊಂದು ಲವ್.. ಗಂಡನ ಪ್ರೀತಿ ಕೊಂದ ಕೊಲೆಗಾರ್ತಿ..!
ಇನ್ನು, ಚಿಕ್ಕಮಗಳೂರಿನಲ್ಲಿ 2 ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್, ಬಾಳೂರು, ಕೊಟ್ಟಿಗೆಹಾರ, ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ, ಕಳಸ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಲಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಹೃದಯ ವಿದ್ರಾವಕ ಘಟನೆ.. ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮಗು ದಾರುಣ ಬಲಿ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ