ರಾತ್ರಿ 3 ಗಂಟೆ ಸುಮಾರಿಗೆ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ
ಸ್ಕಾರ್ಪಿಯೋ ಕಾರಿನಲ್ಲಿದ್ದ 10 ಜನರ ಪೈಕಿ ಐವರು ಸ್ಥಳದಲ್ಲೇ ಸಾವು
ವೇಗವಾಗಿ ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದು ಫುಲ್ ಜಖಂ
ರಾಂಚಿ: ಮದುವೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾದ ಪರಿಣಾಮ 2 ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 5 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯು ಜಾರ್ಖಂಡ್ನ ಗಿರಿದಿಃ ಜಿಲ್ಲೆಯ ಬಾಘಮಾರ ಗ್ರಾಮ ಬಳಿ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿದ ಐವರು ಹಾಗೂ ಗಾಯಗೊಂಡವರು ಎಲ್ಲ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಜಿಲ್ಲೆಯ ಟಿಕೋಡಿಹ್ ಗ್ರಾಮದಲ್ಲಿ ಸಂಬಂಧಿಯೊಬ್ಬರ ಮದುವೆ ಮುಗಿಸಿ, ಊಟ ಮಾಡಿಕೊಂಡು ರಾತ್ರಿ 3 ಗಂಟೆ ಸುಮಾರಿಗೆ ಸ್ಕಾರ್ಪಿಯೋ ಕಾರಿನಲ್ಲಿ ತಮ್ಮ ಥೋರಿಯಾ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ಕಾರು ವೇಗವಾಗಿ ಚಲಿಸುತ್ತಿತ್ತು. ಅದೇ ಸ್ಪೀಡ್ನಲ್ಲಿ ಹೋಗಿ ರಸ್ತೆ ಬದಿ ಇರುವ ಮರಕ್ಕೆ ಕಾರು ರಭಸದಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಪರಿಣಾಮ ಕಾರಿನಲ್ಲಿದ್ದ 10 ಜನರ ಪೈಕಿ ಎರಡು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ 5 ಜನ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ