ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ಐವರು ಭಕ್ತರು ನಿಧನ

author-image
Veena Gangani
Updated On
ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ಐವರು ಭಕ್ತರು ನಿಧನ
Advertisment
  • ಬಾಗಲಕೋಟೆಯಿಂದ ಕಲಬುರಗಿಗೆ ಹೋಗುತ್ತಿದ್ದಾಗ ದುರ್ಘಟನೆ
  • ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿದ್ದ ಭಕ್ತರು
  • 15ಕ್ಕೂ ಹೆಚ್ಚು ಭಕ್ತರಿದ್ದ ಟಿಟಿ ವಾಹನ ಭೀಕರ ಅಪಘಾತ

ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಐವರು ಭಕ್ತರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಮೃತ ಐವರು ಬಾಗಲಕೋಟೆ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತರ ಹೆಸರು ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ:ಮತ್ತೆ ಕಿರುತೆರೆ ಲೋಕಕ್ಕೆ ಎಂಟ್ರಿ ಕೊಟ್ಟ ಬಿಗ್​ಬಾಸ್​ ಖ್ಯಾತಿಯ ಭವ್ಯಾ ಗೌಡ; ಯಾವ ಸೀರಿಯಲ್?

publive-image

ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಾಗಲಕೋಟೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ಆಗಮಿಸುತ್ತಿದ್ದರು. ಆದರೆ ಇದೇ ವೇಳೆ ನಿಂತ ಲಾರಿಗೆ  ಹಿಂದಿನಿಂದ ಬಂದ ಟಿಟಿ ವಾಹನ ಡಿಕ್ಕಿ ಹೊಡೆದಿದೆ.

publive-image

15ಕ್ಕೂ ಹೆಚ್ಚು ಭಕ್ತರಿದ್ದ ಟಿಟಿ ವಾಹನ ಏಕಾಏಕಿ ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ 4 ಭಕ್ತರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಇನ್ನೊಬ್ಬರು ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

publive-image

ಇನ್ನೂ, ಈ ಅಪಘಾತದಲ್ಲಿ ಗಾಯಗೊಂಡ ಹಲವರನ್ನು ಕಲಬುರಗಿ ಹಾಗೂ ಜೇವರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಜೇವರ್ಗಿ ಹಾಗೂ ನೆಲೋಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment