/newsfirstlive-kannada/media/post_attachments/wp-content/uploads/2024/12/Army.jpg)
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದೆ. ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾಗಿದ್ದು, ಈ ದುರ್ಘಟನೆಯಲ್ಲಿ ಐವರು ಯೋಧರು ಸಾವನ್ನಪ್ಪಿದ್ದಾರೆ. ಜತೆಗೆ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ. ವೈದ್ಯರು ಎಲ್ಲರಿಗೂ ಚಿಕಿತ್ಸೆ ನೀಡುತ್ತಿದ್ದಾರೆ. ಈಗಲೇ ಏನು ಹೇಳಲು ಆಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸಾವು ಬದುಕಿನ ಮಧ್ಯೆ ಹಲವರ ಹೋರಾಟ
ಈ ಸಂಬಂಧ ಮಾತಾಡಿದ ಹಿರಿಯ ಸೇನಾಧಿಕಾರಿ ಒಬ್ಬರು, ಅಪಘಾತದಲ್ಲಿ ಐವರು ಯೋಧರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇನ್ನೂ ಕೆಲವು ಸೈನಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ ಸೈನಿಕರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದರು.
ಇದನ್ನೂ ಓದಿ:ಟೀಮ್ ಇಂಡಿಯಾಗೆ ಬಿಗ್ ಶಾಕ್; 4ನೇ ಟೆಸ್ಟ್ನಿಂದ ಕ್ಯಾಪ್ಟನ್ ರೋಹಿತ್ ಔಟ್; ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ